ಹೈದರಾಬಾದ್​-ಕರ್ನಾಟಕ ಹೋರಾಟಗಾರ ವೈಜನಾಥ್ ಪಾಟೀಲ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ ವೈಜನಾಥ್ ಪಾಟೀಲ್(82) ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೈಜನಾಥ್ ಪಾಟೀಲ್, ಎಂಎಲ್​ಸಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ರಾಮಕೃಷ್ಣ ಹೆಗಡೆ, ಹೆಚ್​.ಡಿ.ದೇವೇಗೌಡ ಸಂಪುಟದಲ್ಲಿ ಇವರು ಸಚಿವರಾಗಿದ್ದರು. ಅಲ್ಲದೆ, ಹೈ-ಕ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಆರಂಭಿಸಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ್ ಪಾಟೀಲ್​ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ನಾಳೆ ಕಲಬುರಗಿ ಜಿಲ್ಲೆ ಚಿಂಚೋಳಿ ತೋಟದಲ್ಲಿ […]

ಹೈದರಾಬಾದ್​-ಕರ್ನಾಟಕ ಹೋರಾಟಗಾರ ವೈಜನಾಥ್ ಪಾಟೀಲ್ ಇನ್ನಿಲ್ಲ
sadhu srinath

|

Nov 02, 2019 | 12:07 PM

ಬೆಂಗಳೂರು: ಮಾಜಿ ಸಚಿವ ವೈಜನಾಥ್ ಪಾಟೀಲ್(82) ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೈಜನಾಥ್ ಪಾಟೀಲ್, ಎಂಎಲ್​ಸಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ರಾಮಕೃಷ್ಣ ಹೆಗಡೆ, ಹೆಚ್​.ಡಿ.ದೇವೇಗೌಡ ಸಂಪುಟದಲ್ಲಿ ಇವರು ಸಚಿವರಾಗಿದ್ದರು. ಅಲ್ಲದೆ, ಹೈ-ಕ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಆರಂಭಿಸಿದ್ದರು.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ್ ಪಾಟೀಲ್​ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ನಾಳೆ ಕಲಬುರಗಿ ಜಿಲ್ಲೆ ಚಿಂಚೋಳಿ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ.

ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ನಿಧನರಾದ ಮಾಜಿ ಸಚಿವ ವೈಜನಾಥ ಪಾಟೀಲ್ ಅವರ ಅಂತಿಮ ದರ್ಶನ ಪಡೆದು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada