ಬೆಂಗಳೂರು: ಮಾಜಿ ಸಚಿವ ವೈಜನಾಥ್ ಪಾಟೀಲ್(82) ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೈಜನಾಥ್ ಪಾಟೀಲ್, ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ರಾಮಕೃಷ್ಣ ಹೆಗಡೆ, ಹೆಚ್.ಡಿ.ದೇವೇಗೌಡ ಸಂಪುಟದಲ್ಲಿ ಇವರು ಸಚಿವರಾಗಿದ್ದರು. ಅಲ್ಲದೆ, ಹೈ-ಕ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಆರಂಭಿಸಿದ್ದರು.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ್ ಪಾಟೀಲ್ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ನಾಳೆ ಕಲಬುರಗಿ ಜಿಲ್ಲೆ ಚಿಂಚೋಳಿ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ನಿಧನರಾದ ಮಾಜಿ ಸಚಿವ ವೈಜನಾಥ ಪಾಟೀಲ್ ಅವರ ಅಂತಿಮ ದರ್ಶನ ಪಡೆದು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
Published On - 8:28 am, Sat, 2 November 19