ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ: ಕಾರು ಪತ್ತೆ

ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಸದ್ಯ ನಾಪತ್ತೆ ಆಗಿದ್ದಾರೆ. ಆದರೆ ಅವರ ಬಿಎಂಡಬ್ಲೂ ಕಾರ್ ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲಿಸಿದ್ದು, ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ: ಕಾರು ಪತ್ತೆ
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ನಾಪತ್ತೆ: ಕುಳೂರಿನ ಸೇತುವೆ ಮೇಲೆ ಕಾರು ಪತ್ತೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Oct 06, 2024 | 11:02 AM

ಮಂಗಳೂರು, ಅಕ್ಟೋಬರ್​ 06: ಮಾಜಿ ಶಾಸಕ ಮೊಯಿದ್ದೀನ್ ಬಾವಾ (Former MLA Moinuddin Bawa) ಸೋದರ ಮುಮ್ತಾಜ್ ಅಲಿ ನಾಪತ್ತೆ ಆಗಿದ್ದು, ನಗರದ ಕೂಳೂರು ಬ್ರಿಡ್ಜ್​​ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕೆಎ19 ಎಂಜಿ0004 ಸಂಖ್ಯೆಯ BMW X5 ಕಾರು ಪತ್ತೆ ಆಗಿದೆ. ಸಾಯುತ್ತೇನೆ ಅಂತಾ ಹೇಳಿ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಎಸ್​ಡಿಆರ್​ಎಫ್​, ಎನ್​ಡಿಆರ್​​ಎಫ್​ ಅಗ್ನಿಶಾಮಕ ಸಿಬ್ಬಂದಿಯಿಂದ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ನಸುಕಿನ ಜಾವ 3 ಗಂಟೆಗೆ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದಾರೆ. ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆ ಮೇಲೆ ಕಾರು ಪತ್ತೆ ಆಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಅಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದು, ಅವರ ಮುಂದೆ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪ; ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು

ಸ್ಥಳಕ್ಕೆ ಎಫ್​​ಎಸ್​ಎಲ್​ ತಂಡ ಕೂಡ ಆಗಮಿಸಿದ್ದು, ಅಪಘಾತ ಆದ ಸ್ಥಿತಿಯಲ್ಲಿ ಪತ್ತೆಯಾದ BMW ಕಾರಿರನ್ನು ಇಂಚಿಂಚು ಬಿಡದೆ ಸಿಬ್ಬಂದಿಗಳು ಶೋಧಿಸುತ್ತಿದ್ದಾರೆ. ಡೋರ್ ಹ್ಯಾಂಡಲ್ ಬಳಿ ಪಿಂಗರ್ ಪ್ರಿಂಟ್ ಮಾದರಿ ಸಂಗ್ರಹಿಸುತ್ತಿದ್ದಾರೆ.

ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಹೇಳಿದ್ದಿಷ್ಟು 

ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರ್ ಚಲಾಯಿಸಿ ಬಂದಿದ್ದಾರೆ. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದರು.

ಇದನ್ನೂ ಓದಿ: ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ

ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್​ಎಸ್​ಎಲ್​ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿದೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈಜು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಿಷ್ಟು 

ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈಜು ತಜ್ಞ ಈಶ್ವರ್ ಮಲ್ಪೆ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರ್ಯಾಚರಣೆಗೂ ಮುನ್ನ ಟಿವಿ9 ಜೊತೆ ಮಾತನಾಡಿದ ಈಜು ತಜ್ಞ ಈಶ್ವರ್ ಮಲ್ಪೆ, ಬೆಳಗ್ಗೆ 6.30ಕ್ಕೆ ಕರೆ ಮಾಡಿ ನನಗೆ ವಿಚಾರ ತಿಳಿಸಿದರು. ಬಿಡ್ಜ್ ಕೆಳಗೆ 100 ಮೀ. ಸುತ್ತಮುತ್ತ ಸ್ಕೂಬಾ ಮಾಡಿ ಶೋಧ ಮಾಡುತ್ತೇವೆ. ನದಿ ನೀರು ಸಮುದ್ರಕ್ಕೆ ಸೇರುವ ಮುನ್ನ ಕಾರ್ಯಾಚರಣೆ ಮಾಡಬೇಕು. ಇಲ್ಲದಿದ್ದರೆ ಕಾರ್ಯಾಚರಣೆ ಕಷ್ಟವಾಗುತ್ತೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:36 am, Sun, 6 October 24