ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

Former PM HD Deve Gowda Birthday: ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Follow us
guruganesh bhat
|

Updated on:May 15, 2021 | 2:48 PM

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸದೇ ತಮ್ಮ ಹತ್ತಿರದ ಕೊವಿಡ್ ಸೋಂಕಿತರ ಆರೈಕೆ ಮತ್ತು ನೆರವಿಗೆ ಸಹಾಯ ಮಾಡಬೇಕೆಂದು ಅಭಿಮಾನಿಗಳು ಮತ್ತು ಜೆಡಿಎಸ್​ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಮೇ 18ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಅವರು ಈ ಮನವಿ ಮಾಡಿದ್ದಾರೆ.

ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಇಬ್ಬರಿಗೂ ಕೊವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ನಂತರ ಅವರಿಬ್ಬರೂ ಗುಣಮುಖರಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತನಾಡಿ, ಕೊವಿಡ್-19 ಪಿಡುಗಿನ ನಿರ್ವಹನೆ ವಿಚಾರವಾಗಿ ಚರ್ಚಿಸಿದ್ದರು. ಈ ಕುರಿತು ದೇವೇಗೌಡ ಟ್ವೀಟ್ ಮಾಡಿ, ಪ್ರಧಾನಿ ತಮಗೆ ಕರೆ ಮಾಡಿದ್ದರು ಎಂದು ದೃಢಪಡಿಸಿದ್ದರು. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೊರೊನಾ ಸೋಂಕು ನಿರ್ವಹಣೆ ಬಗ್ಗೆ ಸಲಹೆ ನೀಡಿದ್ದರು.

ತಮ್ಮ 4 ಪುಟಗಳ ಪತ್ರವನ್ನು ಟ್ವೀಟ್ ಮಾಡಿದ್ದ ದೇವೇಗೌಡ, ‘ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿನ್ನೆ ಪತ್ರ ಬರೆದಿದ್ದೆ. ಕೊರೊನಾ ಪಿಡುಗು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲ ಸಲಹೆಗಳನ್ನೂ ನೀಡಿದ್ದೇನೆ. ಇದು ರಾಷ್ಟ್ರೀಯ ಬಿಕ್ಕಟ್ಟು ಮತ್ತು ನಾವು ಒಂದು ದೇಶವಾಗಿ ಈ ಸಮಸ್ಯೆಯನ್ನು ಎದುರಿಸಬೇಕಿದೆ. ಎಲ್ಲ ಬಗೆಯ ರಚನಾತ್ಮಕ ಕ್ರಮಗಳನ್ನು ನಾವು ಬೆಂಬಲಿಸಬೇಕು. ಜನರ ಸಂಕಷ್ಟ ಕಡಿಮೆ ಮಾಡಲು ಮತ್ತು ಜೀವ ಉಳಿಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು’ ಎಂದು ಹೇಳಿದ್ದರು.

ತಮ್ಮೊಡನೆ ಪ್ರಧಾನಿ ಮಾತನಾಡಿದ ವಿಚಾರವನ್ನೂ ದೇವೇಗೌಡರು ಟ್ವೀಟ್ ಮೂಲಕವೇ ತಿಳಿಸಿದ್ದರು. ‘ಪ್ರಧಾನಿ ನರೇಂದ್ರ ಮೋದಿ ಈಗಷ್ಟೇ ನನ್ನೊಂದಿಗೆ ಮಾತನಾಡಿದರು. ನಾನು ಬರೆದ ಪತ್ರವನ್ನು ಸಂಪೂರ್ಣ ಓದಿದ್ದಾಗಿ ತಿಳಿಸಿದರು. ನನ್ನ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ಅವರ ಕಾಳಜಿ ಮತ್ತು ಶೀಘ್ರ ಪ್ರತಿಕ್ರಿಯೆಗಾಗಿ ಧನ್ಯವಾದ ಅರ್ಪಿಸುತ್ತೇನೆ. ಈ ಪಿಡುಗನ್ನು ಸೋಲಿಸಲು ನಾವು ಜೊತೆಗೂಡಿ ಕೆಲಸ ಮಾಡಬೇಕಿದೆ’ ಎಂದು ದೇವೇಗೌಡರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಬಗ್ಗೆ ದೇವೇಗೌಡ ಕಳವಳ; ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ: ನಿಮ್ಮ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದ ಪ್ರಧಾನಿ ಮೋದಿ

(Former PM Deve Gowda requests do not celebrate my birthday but help covid patients On May 18th)

Published On - 2:46 pm, Sat, 15 May 21

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ