AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಗುಣಮುಖ; ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಬಿಡುಗಡೆ

ಮಾರ್ಚ್ 31ರಂದು  87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಕಳೆದ 5 ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ಡಿ.ದೇವೇಗೌಡ ದಂಪತಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನಾದಿಂದ ಗುಣಮುಖ; ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಬಿಡುಗಡೆ
ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ
guruganesh bhat
|

Updated on:Apr 05, 2021 | 2:43 PM

Share

ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ  ಇಂದು  ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಆಸ್ಪತ್ರೆ ಮುಖ್ಯಸ್ಥ ಸುದರ್ಶನ್ ಬಲ್ಲಾಳ್​ ಹೂಗುಚ್ಛ ನೀಡಿ ಆಸ್ಪತ್ರೆಯಿಂದ ಬೀಳ್ಕೊಡುಗೆ ನೀಡಿದ್ದಾರೆ. ಕಳೆದ 5 ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ಡಿ.ದೇವೇಗೌಡ ದಂಪತಿ ಚಿಕಿತ್ಸೆ ಪಡೆಯುತ್ತಿದ್ದರು.

ಮಾರ್ಚ್ 31ರಂದು  87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಒಂದು ವಾರದಿಂದ ಮಾಜಿಪ್ರಧಾನಿ ದೇವೇಗೌಡರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಕೆಮ್ಮು ಹೆಚ್ಚಾದ ಹಿನ್ನೆಲೆಯಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿತ್ತು. ಈ ಟೆಸ್ಟ್​ನಲ್ಲಿ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಬಳಿಕ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಈ ವೇಳೆ ದೇವೇಗೌಡರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗಿತ್ತು.

ಈ ಕುರಿತು ಟ್ವೀಟ್ ಮಾಡಿದ್ದ ಮಾಜಿ ಪ್ರಧಾನಿ ದೇವೇಗೌಡ, ‘ ನನಗೂ ಹಾಗೂ ನನ್ನ ಹೆಂಡತಿ ಚನ್ನಮ್ಮಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಯಾರೂ ಆತಂಕ ಪಡೆಬೇಡಿ ಎಂದು ಹೆಚ್.ಡಿ.ದೇವೇಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ವಿನಂತಿಸಿಕೊಂಡಿದ್ದರು. ಇಂದು ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳುವ ಸಾಧ್ಯತೆಗಳಿವೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಸೋಂಕು‌ ತಗುಲಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮನವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಹ, ಜೆಡಿಎಸ್ ವರಿಷ್ಠರಿಗೆ ಕೊರೊನಾ ಸೋಂಕು ತಗುಲಿರುವುದನ್ನು ತಿಳಿದು ದೂರವಾಣಿ ಕರೆ ಮಾಡಿ, ‘ ನಿಮಗೆ ಬೇಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ’ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ಇದನ್ನೂ ಓದಿ: ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ

Published On - 2:31 pm, Mon, 5 April 21