AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

HD Deve Gowda health update: ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯ ಚೇತರಿಕೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂಉ ಮೂಲಗಳು ತಿಳಿಸಿವೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಹೆಚ್​ಡಿ ದೇವೇಗೌಡ (ಸಂಗ್ರಹ ಚಿತ್ರ)
Sunil MH
| Edited By: |

Updated on:Oct 13, 2025 | 1:01 PM

Share

ಬೆಂಗಳೂರು, ಅಕ್ಟೋಬರ್ 13: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರ (HD Devegowda) ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದಾರೆ. ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದರು.

ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡ ಆರೋಗ್ಯ ವಿಚಾರಿಸಿದ್ದರು. ದೇವೇಗೌಡರು ಚೇತರಿಸಿಕೊಳ್ಳುತ್ತಿದ್ದು ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಅಕ್ಟೋಬರ್ 10 ರಂದು ತಿಳಿಸಿದ್ದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ದೇವೇಗೌಡರ ಆರೋಗಿ ಚೇತರಿಕೆಗಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ನಾಯಕರು ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ಕೂಡ ಸಲ್ಲಿಸಿದ್ದರು. ಚಿಕ್ಕಬಳ್ಳಾಪುರ ನಗರದ ಹೊರವಲಯದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ101 ತೆಂಗಿನಕಾಯಿ ಈಡುಗಾಯಿ ಒಡೆದು ಮಾಜಿ ಪ್ರಧಾನಿಯ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Mon, 13 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್