AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕಾ ಬೆಳೆಗಾರರಿಗೆ ನೆರವಾಗುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

HD Deve Gowda: ಹೂವು, ಹಣ್ಣು, ತರಕಾರಿ ಖರೀದಿ ಮಾಡುವವರಿಲ್ಲದೇ ಹಾಳಾಗುತ್ತಿವೆ. ಇಂತಹ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನೆರವಿಗೆ ಧಾವಿಸಬೇಕು..

ತೋಟಗಾರಿಕಾ ಬೆಳೆಗಾರರಿಗೆ ನೆರವಾಗುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಗ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
guruganesh bhat
|

Updated on:May 25, 2021 | 3:15 PM

Share

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಲಾಕ್​ಡೌನ್​ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೂವು, ಹಣ್ಣು, ತರಕಾರಿ ಖರೀದಿಸುವವರಿಲ್ಲದೆ ಹಾಳಾಗುತ್ತಿದೆ. ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ತೋಟಗಾರಿಕೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ.

ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲ. ಜತೆಗೆ ತೋಟಗಾರಿಕಾ ಬೆಳೆಗಳ ಬೆಲೆ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಹೂವು, ಹಣ್ಣು, ತರಕಾರಿ ಖರೀದಿ ಮಾಡುವವರಿಲ್ಲದೇ ಹಾಳಾಗುತ್ತಿವೆ. ಇಂತಹ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನೆರವಿಗೆ ಧಾವಿಸಬೇಕು. ತೋಟಗಾರಿಕಾ ಬೆಳೆಗಳ ಬೆಳೆಗಾರರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಸಹಾಯ ಮಾಡುವಂತೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಮುನ್ನವೂ ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಿವಿಧ ವಿಷಯಗಳ ಬಗ್ಗೆ ಮನವಿ ಮಾಡಿದ್ದರು.

ಇಡೀ ದೇಶ ಕೊರೊನಾ ಮಹಾಮಾರಿಯಿಂದ ಬಿಕ್ಕಟ್ಟು ಪರಿಸ್ಥಿತಿ ಎದುರಿಸುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದಿದ್ದರು. ಈ ಹಿಂದೆ ಬರೆದಿದ್ದ ಮೂರು ಪುಟಗಳ ತಮ್ಮ ಪತ್ರದಲ್ಲಿ ಕೊರೊನಾ ಸೋಂಕಿನ ತಡೆಗೆ ಕೆಲ ಸಲಹೆ ನೀಡಿರುವ ದೇವೇಗೌಡರು, ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಿ, ಜಿಲ್ಲಾಡಳಿತಗಳಿಗೇ ಇಂತಹ ಅವಕಾಶ ನೀಡಬೇಕೆಂದು ಕೋರಿದ್ದರು.

ಜಿಲ್ಲಾ ಮಟ್ಟದಲ್ಲಿ ಕೊರೊನಾ ವಾರ್ ರೂಂ ತೆರೆಯಿರಿ. ತಾಲೂಕು, ಹಳ್ಳಿಗಳ ಕಡೆಯೂ ಗಮನ ಹರಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಜತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನ ನಿಯೋಜಿಸಿ ಎಂದು ಅವರು ಸಲಹೆ ನೀಡಿದ್ದರು.

ಮಾಜಿ ಪ್ರಧಾನಿ ದೇವೇಗೌಡರು ನೀಡಿದ ಸಲಹೆ ಏನು? ಕೊರೊನಾ ಲಸಿಕೆ ಬಗ್ಗೆ ಸಕಾರಾತ್ಮಕ ಸಂದೇಶ ನೀಡಬೇಕು. ಕೊರೊನಾ ಲಸಿಕೆ ಪಡೆಯಲು ಜನರಿಗೆ ‌ಗಡುವು ನೀಡಬೇಕು. ಆಯಾ ಕ್ಷೇತ್ರದ ಜನರಿಗೆ ಲಸಿಕೆ ಹಾಕಿಸುವುದಕ್ಕೆ ಟಾರ್ಗೆಟ್ ನೀಡಿ. ಜನಪ್ರತಿನಿಧಿಗಳಿಗೇ ಹೀಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿ. ಬಡವರನ್ನು ಗಮನದಲ್ಲಿಟ್ಟುಕೊಂಡು ದರ ನಿಗದಿ ಮಾಡಿ. ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ. ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳದಿದ್ದರೂ ಗುರುತಿನ ಚೀಟಿ ಇಲ್ಲದಿದ್ದರೂ ಇವುಗಳ ಗೊಡವೆ ಇಲ್ಲದೆ, ಲಸಿಕೆ ಪಡೆಯಲು ಅಡ್ಡಿಯಾಗಬಾರದು ಎಂದು ಅವರು ಈ ಮುನ್ನವೂ ಪತ್ರ ಬರೆದಿದ್ದರು.

ಇದನ್ನೂ ಓದಿ: ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು

ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

(Former PM HD Deve Gowda writes Letter To prime minister Narendra Modi to help horticulture farmers in Lockdown)

Published On - 3:08 pm, Tue, 25 May 21

Follow Us
guruganesh bhat
guruganesh bhat
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ