ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯ ಸ್ಥಿರ, ಉಸಿರಾಟದಲ್ಲಿ ತುಸು ಏರುಪೇರು, ಮುಂದುವರೆದ ಚಿಕಿತ್ಸೆ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಅವರು ದಾಖಲಾಗಿರುವ ಮಣಿಪಾಲ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯ ಸ್ಥಿರ, ಉಸಿರಾಟದಲ್ಲಿ ತುಸು ಏರುಪೇರು, ಮುಂದುವರೆದ ಚಿಕಿತ್ಸೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Follow us
guruganesh bhat
|

Updated on:Apr 01, 2021 | 9:00 PM

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದ್ದು, ಉಸಿರಾಟದಲ್ಲಿ ತುಸು ಏರುಪೇರು ಉಂಟಾಗಿದೆ. ಹೆಚ್.ಡಿ.ದೇವೇಗೌಡರಿಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಅವರು ದಾಖಲಾಗಿರುವ ಮಣಿಪಾಲ್ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು  ತಗುಲಿರುವುದು ಮಾರ್ಚ್ 31ರಂದು ದೃಢಪಟ್ಟಿತ್ತು. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ತಗುಲಿತ್ತು. ಕಳೆದ ಒಂದು ವಾರದಿಂದ ದೇವೇಗೌಡರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಕೆಮ್ಮು ಹೆಚ್ಚಾದ ಹಿನ್ನೆಲೆಯಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿತ್ತು. ಈ ಟೆಸ್ಟ್​ನಲ್ಲಿ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಬಳಿಕ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಈ ವೇಳೆ ದೇವೇಗೌಡರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು.  ತದನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ದೇವೇಗೌಡ ದಂಪತಿ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಮಣಿಪಾಲ್ ಆಸ್ಪತ್ರೆ ವೈದ್ಯರಿಂದ ದಂಪತಿಗೆ ಕೊರೊನಾ ಚಿಕಿತ್ಸೆ ಮುಂದುವರೆದಿದೆ. ಈ ಹಿಂದೆ ಹೆಚ್.​ಡಿ.ರೇವಣ್ಣ ಅವರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ಸದ್ಯ ಸೋಂಕಿನಿಂದ ರೇವಣ್ಣ ಚೇತರಿಸಿಕೊಂಡಿದ್ದಾರೆ.

ನನಗೂ ಹಾಗೂ ನನ್ನ ಹೆಂಡತಿ ಚನ್ನಮ್ಮಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಯಾರೂ ಆತಂಕ ಪಡಬೇಡಿ ಎಂದು ಹೆಚ್.ಡಿ.ದೇವೇಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ವಿನಂತಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಈ ಬಗ್ಗೆ ಹೆಚ್​.ಡಿ.ಡಿ ಟ್ವೀಟ್ ಮಾಡಿದ್ದು ಪ್ರಧಾನಿಗೆ ಆಭಾರಿಯಾಗಿದ್ದೇನೆ ಎಂದು ಬರೆದುಕೊಂಡಿದ್ದರು

ನನ್ನ ಆರೋಗ್ಯದ ಬಗ್ಗೆ ಕರೆ ಮಾಡಿ ವಿಚಾರಿಸಿದ್ದಕ್ಕಾಗಿ ಪ್ರಧಾನಿ ಅವರಿಗೆ ನಾನು ಆಭಾರಿಯಾಗಿದ್ದೇನೆ. ಯಾವುದೇ ನಗರದಲ್ಲಿ ನನ್ನ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದಿದ್ದಾರೆ. ಅವರ ಈ ಪ್ರಸ್ತಾಪಕ್ಕೆ ನಾನು ಆಭಾರಿಯಾಗಿದ್ದೇನೆ. ಬೆಂಗಳೂರಿನಲ್ಲಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ: HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ: ನಿಮ್ಮ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದ ಪ್ರಧಾನಿ ಮೋದಿ

Published On - 8:59 pm, Thu, 1 April 21