ಜೆಡಿಎಸ್‌ ಕಾರ್ಯಕರ್ತರಿಗೊಂದು ಪತ್ರ ಬರೆದು ಮಹತ್ವದ ಮನವಿ ಮಾಡಿದ ದೇವೇಗೌಡ, ಪತ್ರದಲ್ಲೇನಿದೆ?

HD Devegowda Birthday:ಇದೇ ಮೇ 18ರಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಈ ಕುರಿತಾಗಿ ದೇವೇಗೌಡ್ರು ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸುವ ಮೂಲಕ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಮಹತ್ವದ ಕರೆಯೊಂದನ್ನು ನೀಡಿದ್ದಾರೆ.

ಜೆಡಿಎಸ್‌ ಕಾರ್ಯಕರ್ತರಿಗೊಂದು ಪತ್ರ ಬರೆದು ಮಹತ್ವದ ಮನವಿ ಮಾಡಿದ ದೇವೇಗೌಡ, ಪತ್ರದಲ್ಲೇನಿದೆ?
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ
Follow us
ರಮೇಶ್ ಬಿ. ಜವಳಗೇರಾ
|

Updated on: May 16, 2024 | 3:51 PM

ಬೆಂಗಳೂರು, (ಮೇ 16):  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಲ್ಲದೇ ಈಗಾಗಲೇ ಸಂತ್ರಸ್ತೆ ಅಪಹರಣ ಆರೋಪದ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಹೀಗಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ (HD Devegowda ) ಅವರು ನೋವಿನಲ್ಲಿದ್ದಾರೆ. ಹೀಗಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅಭಿಮಾನಿಗಳು ಹಾಗೂ ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದಿದ್ದು, ಈ ವರ್ಷ ಕಾರಣಾಂತರಗಳಿಂದ ನಾನು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ, ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಎಚ್‌ಡಿ ದೇವೇಗೌಡ ಅವರು ಇದೇ ಮೇ 18ಕ್ಕೆ 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದಾರೆ. ಆದರೆ, ಈ ಬಾರಿ ಕಾರಣಾಂತರಗಳಿಂದ ಅವರು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಅಭಿಮಾನಿಗಳು ಹಾಗೂ ಜೆಡಿಎಸ್‌ ಕಾರ್ಯಕರ್ತರಲ್ಲಿ ವಿನಂತಿಸಿಕೊಂಡಿದ್ದಾರೆ. ಅಲ್ಲದೇ ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ (ಎನ್​ಡಿಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಜಾಮೀನು ಸಿಕ್ಕಿದರೂ ಹೆಚ್​ಡಿ ರೇವಣ್ಣಗೆ ಕಡಿಮೆಯಾಗಿಲ್ಲ ಟೆನ್ಷನ್: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನಿಗೆ ಅರ್ಜಿ

ನೋವಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ

ಪ್ರಮುಖವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ತಮ್ಮ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಬಹಳಷ್ಟು ಚಿಂತೆಯಾಗಿದೆ. ಅಶ್ಲೀಲ ವಿಡಿಯೋ ಹಾಗೂ ರೇವಣ್ಣ ಬಂಧನದಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರು ಉಂಟುಮಾಡಿದೆ. ಒಂದು ಕಡೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರೆ, ಮತ್ತೊಂದು ಕಡೆ ರಾಜ್ಯದಲ್ಲಿ ಎಚ್‌ಡಿ ರೇವಣ್ಣ ಅವರ ಬಂಧನ ಮತ್ತು ಬಿಡುಗಡೆ ಎಚ್‌ಡಿ ದೇವೇಗೌಡರ ಕುಟುಂಬವನ್ನು ಕಂಗೆಡಿಸಿದ್ದು, ಇಡೀ ದೊಡ್ಡಗೌಡರ ಕುಟುಂಬದಲ್ಲಿ ಆತಂಕ ಛಾಯೆ ಆವರಿಸಿದೆ. ಹೀಗಾಗಿ ಜನ್ಮದಿನದ ಆಚರಣೆಯನ್ನು ರದ್ದು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ,

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ