HD Deve Gowda: ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

HD Deve Gowda: ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಆಸ್ಪತ್ರೆಗೆ ದಾಖಲು
ಎಚ್​ಡಿ ದೇವೇಗೌಡ (ಸಂಗ್ರಹ ಚಿತ್ರ)

Updated on: Feb 28, 2023 | 7:42 PM

ಬೆಂಗಳೂರು: ಜೆಡಿಎಸ್ (JDS) ವರಿಷ್ಠ, ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Deve Gowda) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆಗೆ ತೆರಳುವ ಬಗ್ಗೆ ಬೆಳಿಗ್ಗೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದರು. ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದರು. ಇದೀಗ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಈ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡುವುದು ತನಗಿಷ್ಟವಿಲ್ಲ. ದೇವೇಗೌಡರ ಆರೋಗ್ಯವೇ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದರು.

ದೇವೇಗೌಡರಿಗೆ ಕಾಲು, ಮಂಡಿ ನೋವಿದೆ. ಮನೆಯಲ್ಲಿ ವಿಶ್ರಾಂತಿ ದೊರೆಯುತ್ತಿಲ್ಲ. ಅವರು ಪ್ರವಾಸಕ್ಕೆ ಹೋಗಲೇಬೇಕೆಂದು ಹೇಳುತ್ತಿದ್ದಾರೆ. ಅವರನ್ನು ಕಾಣಲು ಜನ ಬರುವುದು ಜಾಸ್ತಿ ಆಗಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಇದ್ದರೆ ಒಳ್ಳೆಯದು, ಸ್ಪಂದಿಸಬಹುದು ಎಂದು ದಾಖಲಿಸಲಾಗಿದೆ ಅಷ್ಟೆ. ನಾನು ಪ್ರವಾಸದಲ್ಲಿ ಇರುವುದರಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಆಗಿಲ್ಲ. ಆಸ್ಪತ್ರೆ ವರದಿ ನೋಡಿದ ಬಳಿಕ ಮಾತನಾಡುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:19 pm, Tue, 28 February 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us