ದೆಹಲಿ: ಈ ಬಾರಿ ಅಧಿವೇಶನದಲ್ಲಿ ನಾನು ಒಂದು ದಿನವೂ ಗೈರು ಹಾಜರಾಗಿಲ್ಲ. ಅಧಿವೇಶನ ನಡೆದ ಎಲ್ಲ ದಿನವೂ ನಾನು ಭಾಗಿಯಾಗಿದ್ದೆ. ಆದರೆ ಕಲಾಪದಲ್ಲಿ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಚರ್ಚೆ ಮಾಡುವುದಕ್ಕೆ ವಿಪಕ್ಷಗಳಿಗೆ ಅವಕಾಶ ಮಾಡಿಕೊಟ್ಟಿಲ್ಲ. ಮುಂದಿನ ಅಧಿವೇಶನದಲ್ಲಾದರೂ ಅವಕಾಶ ನೀಡಬೇಕು. ಸುಗಮವಾಗಿ ಅಧಿವೇಶನ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ನನಗೆ ಮಾತನಾಡುವುದಕ್ಕೆ ಅವಕಾಶ ಸಿಕ್ಕಿಲ್ಲ. ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಅವಕಾಶ ಸಿಗಬಹುದು ಎಂದು ದೇವೇಗೌಡ ಆಶಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ದೇವೇಗೌಡರ ಭೇಟಿಗೆ ಪ್ರೀತಮ್ ಗೌಡ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವಾಗಿ ಪ್ರರ್ಶನೆ ಕೇಳಿದಾಗ ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಪ್ರಶ್ನೆ ಮಾಡಬೇಡಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.
ಬಿಜೆಪಿಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಗೊಂದಲ ನಿವಾರಿಸಲು ಬೊಮ್ಮಾಯಿ ಸಮರ್ಥರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಮನೆಗೆ ಬಂದಿದ್ದರು. ನನ್ನಿಂದ ಸರ್ಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ. BSY ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
ಮೊದಲ ಬಾರಿಗೆ ಮಹಿಳೆಯರಿಗೆ 12 , 8 ಎಸ್ಸಿ, 12 ಎಸ್ಟಿ ಸಮುದಾಯದ ನಾಯಕರಿಗೆ ಪ್ರಧಾನಿ ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಆದರೆ ಅದು ಏನೇ ಇದ್ದರೂ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ , ನಾನು ಪ್ರಧಾನಿಯಾಗಿದ್ದಾಗಲು ಸಹ ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ ಎಂದು ದೇವೇಗೌಡರು ತಿಳಿಸಿದರು.
(former prime minister hd deve gowda press meet in new delhi)
Published On - 11:43 am, Thu, 12 August 21