Rajiv Gandhi Death Anniversary 2021: ಇಂದು ಕೆಪಿಸಿಸಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
Rajiv Gandhi: ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪದಾಧಿಕಾರಿಗಳು, ಸಂಸದರು, ಶಾಸಕರು ಹಾಗೂ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ.

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಶ್ರೀಲಂಕಾದ ಎಲ್ಟಿಟಿಇ ಉಗ್ರರ ಮಾನವ ಬಾಂಬ್ ದಾಳಿಯಲ್ಲಿ ಹತ್ಯೆಗೊಳಗಾಗಿ ಇಂದಿಗೆ 30 ವರ್ಷ. ರಾಜೀವ್ ಗಾಂಧಿ ಪುಣ್ಯತಿಥಿಯ ಸ್ಮರಾಣಾರ್ಥ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಇಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಮಂತ್ರಿ ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪದಾಧಿಕಾರಿಗಳು, ಸಂಸದರು, ಶಾಸಕರು ಹಾಗೂ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ.
ಕೊವಿಡ್ ವಿಪರೀತವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ನ ಎಲ್ಲಾ ಕಾರ್ಯಕರ್ತರು ಕೊವಿಡ್ ಸೋಂಕಿತರಿಗೆ ಅಗತ್ಯವಿರುವ ಸಹಾಯ ಮಾಡಬೇಕು. ಆಕ್ಸಿಜನ್ ಸಿಲಿಂಡರ್, ಮಾಸ್ಕ್, ಔಷಧ, ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಬೇಕು. ರಾಜೀವ್ ಗಾಂಧಿಯವರ ಸ್ಮರಣಾರ್ಥ ಕೊವಿಡ್ ವಿರುದ್ಧ ಹೋರಾಡಬೇಕು. ಕೊವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಸಲು ಬಡಜನರಿಗೆ ಸಹಾಯ ಮಾಡಬೇಕು ಎಂದು ಈಗಾಗಲೇ ಕಾಂಗ್ರೆಸ್ನ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕರೆ ನೀಡಿದ್ದಾರೆ.
ಕಾಂಗ್ರೆಸ್ನ ವಿಧಾನಸಭಾ ಮತ್ತು ವಿಧಾನಪರಿಷತ್ ಸದಸ್ಯರಿಗೆ ತಮ್ಮ ಕ್ಷೇತ್ರಕ್ಕೆ ಕನಿಷ್ಠ ಎರಡು ಆ್ಯಂಬುಲೆನ್ಸ್ಗಳನ್ನು ಕೊಡುಗೆ ನೀಡಲು ಕೆ.ಸಿ.ವೇಣುಗೋಪಾಲ್ ಕರೆ ನೀಡಿದ್ದಾರೆ. ಅಲ್ಲದೇ, ರಾಜ್ಯ ಮತ್ತು ಜಿಲ್ಲಾಮಟ್ಟಗಳಲ್ಲಿ ಸಾಮೂಹಿಕ ಮಾಸ್ಕ್ ವಿತರಣೆ ಮಾಡಲು ಅವರುಈಗಾಗಲೇ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Anti Terrorism Day 2021 May 21: ನಾಳೆಯೇ ಭಯೋತ್ಪಾದನಾ ವಿರೋಧಿ ದಿನ: ಏನಿದರ ಮಹತ್ವ, ಆಚರಣೆಯ ಹಿಂದಿನ ಕಾರಣವೇನು?
ಕೊವಿಡ್ 19 ನಿಯಮಗಳನ್ನೆಲ್ಲ ಮುರಿದು ಮದ್ಯ ಪಾರ್ಟಿ ನಡೆಸಿದ ದಾವಣಗೆರೆ ಯೂತ್ ಕಾಂಗ್ರೆಸ್ ಅಧ್ಯಕ್ಷ; ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಭಾಗಿ ! (Former Prime Minister Rajiv Gandhi death anniversary Remembrance event today by KPCC)
Published On - 8:00 am, Fri, 21 May 21