Sudhindra Haldodderi: ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿಗೆ ತೀವ್ರ ಅನಾರೋಗ್ಯ; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

| Updated By: ಸಾಧು ಶ್ರೀನಾಥ್​

Updated on: Jun 30, 2021 | 9:45 AM

Former Scientist, Kannada Science Writer: ಈಗಾಗಲೇ ಏಳು ದಿನಗಳಾಗಿರುವುದರಿಂದ ಹಾಲ್ದೊಡ್ಡೇರಿ ಸುಧೀಂದ್ರ ಅವರ ಸ್ಥಿತಿ ಇನ್ನೂ ಗಂಭೀರವಾಗುತ್ತಿದ್ದು, ಬ್ರೈನ್​ ಡೆಡ್ ಆಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಆದರೂ ವೈದ್ಯಕೀಯ ವಿಜ್ಞಾನವು ನಮ್ಮ ನಡುವಿನ ​ಈ ಹಿರಿಯ ವಿಜ್ಞಾನಿಯನ್ನು ಕಾಪಾಡಲಿ ಎಂದು ಹಾಲ್ದೊಡ್ಡೇರಿ ಸುಧೀಂದ್ರ ಅವರ (Sudhindra HN) ಹಿತೈಷಿಗಳು, ಅಪಾರ ಗೆಳೆಯರ ಬಗ್ಗೆ ಆಶಿಸುತ್ತಿದೆ.

Sudhindra Haldodderi: ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿಗೆ ತೀವ್ರ ಅನಾರೋಗ್ಯ; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸುಧೀಂದ್ರ ಹಾಲ್ದೊಡ್ಡೇರಿ
Follow us on

ಬೆಂಗಳೂರು: ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್​ ಸುಧೀಂದ್ರ ಹಾಲ್ದೊಡ್ಡೇರಿ ಅವರು ಅನಾರೋಗ್ಯಕ್ಕೆ ಈಡಾಗಿದ್ದಾರೆ. ಅವರಿಗೆ ಏಳು ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಈ ಮಧ್ಯೆ ಅವರು ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆಯಲ್ಲಿರುವ ಹಾಲ್ದೊಡ್ಡೇರಿ ಸುಧೀಂದ್ರ (Sudhindra Haldodderi) ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿದೆ. ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ ಅವರಿಗೆ ಪ್ರಜ್ಞೆ ಇಲ್ಲವಾಗಿದೆ. ಹಾಲ್ದೊಡ್ಡೇರಿ ಸುಧೀಂದ್ರ ಅವರಿಗೆ ಏಳು ದಿನಗಳ ಹಿಂದೆ ಯಾವ ಪ್ರಮಾಣದ ಹೃದಯಾಘಾತವಾಗಿದೆಯೆಂದ್ರೆ ಅವರ ಮೆದುಳಿಗೆ ಆಕ್ಸಿಜನ್​ ಸರಬರಾಜು ಆಗುವುದು ನಿಂತಿದ್ದು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದೆ (Hypoxic ischemic encephalopathy -HIE) ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಹಾಲ್ದೊಡ್ಡೇರಿ ಸುಧೀಂದ್ರ ಅವರನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಅವರು ಚೇತರಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ. ಈ ಮಧ್ಯೆ, ಅವರಿಗೆ ಕೋವಿಡ್​ ಸೋಂಕು ತಗುಲಿಲ್ಲ. ಚಿಕಿತ್ಸೆ ಭರದಿಂದ ನಡೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈಗಾಗಲೇ ಏಳು ದಿನಗಳಾಗಿರುವುದರಿಂದ ಅವರ ಸ್ಥಿತಿ ಇನ್ನೂ ಗಂಭೀರವಾಗುತ್ತಿದ್ದು, ಬ್ರೈನ್​ ಡೆಡ್ ಆಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಆದರೂ ವೈದ್ಯಕೀಯ ವಿಜ್ಞಾನವು ನಮ್ಮ ನಡುವಿನ ​ಈ ಹಿರಿಯ ವಿಜ್ಞಾನಿಯನ್ನು ಕಾಪಾಡಲಿ ಎಂದು ಹಾಲ್ದೊಡ್ಡೇರಿ ಸುಧೀಂದ್ರ ಅವರ (Sudhindra HN) ಹಿತೈಷಿಗಳು, ಅಪಾರ ಗೆಳೆಯರ ಬಗ್ಗೆ ಆಶಿಸುತ್ತಿದೆ.

(Former Scientist DRDO Former DGM HAL Science Writer Sudhindra Haldodderi heart attack and Hypoxic ischemic encephalopathy)

Published On - 9:40 am, Wed, 30 June 21