Sudhindra Haldodderi: ತಂದೆಯ ಆಸೆಯಂತೆಯೆ ದೇಹದಾನ ಮಾಡಲು ನಿರ್ಧಾರ -ಹಾಲ್ದೊಡ್ಡೇರಿ ಸುಧೀಂದ್ರ ಪುತ್ರಿಯಿಂದ ಮಾಹಿತಿ

Body Donation: ಕನ್ನಡದಲ್ಲಿ ವಿಜ್ಞಾನ ಅಂಕಣಗಳಿಗೆ ಖ್ಯಾತರಾಗಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ. 

Sudhindra Haldodderi: ತಂದೆಯ ಆಸೆಯಂತೆಯೆ ದೇಹದಾನ ಮಾಡಲು ನಿರ್ಧಾರ -ಹಾಲ್ದೊಡ್ಡೇರಿ ಸುಧೀಂದ್ರ ಪುತ್ರಿಯಿಂದ ಮಾಹಿತಿ
Sudhindra Haldodderi: ತಂದೆಯ ಆಸೆಯಂತೆಯೇ ದೇಹದಾನ ಮಾಡಲು ನಿರ್ಧಾರ: ಹಾಲ್ದೊಡ್ಡೇರಿ ಸುಧೀಂದ್ರ ಪುತ್ರಿಯಿಂದ ಮಾಹಿತಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 02, 2021 | 4:31 PM

ಬೆಂಗಳೂರು: ಖ್ಯಾತ ವಿಜ್ಞಾನ ಬರಹಗಾರ, ಡಿಆರ್​ಡಿಒ ಮಾಜಿ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ (59) ಅವರು 10 ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇಂದು ಮಧ್ಯಾಹ್ನ 1 ಗಂಟೆಗೆ ವಿಧಿವಶರಾಗಿದ್ದಾರೆ. 

ದೇಹದಾನ; ಸುಧೀಂದ್ರ ಅವರ ಪುತ್ರಿ ಮೇಘನಾ ಮಾಹಿತಿ 10 ದಿನಗಳ ಹಿಂದೆ ಸುಧೀಂದ್ರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಚಿಕಿತ್ಸೆಗೆಂದು ಜೆಪಿ ನಗರದಲ್ಲಿರುವ Aster RV hospital ಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು. ತಂದೆ ಆಸೆಯಂತೆಯೆ ನಾವು ಕುಟುಂಬಸ್ಥರು ಅವರ ದೇಹದಾನ ಮಾಡುವ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಟಿವಿ9ಗೆ ಸುಧೀಂದ್ರ ಅವರ ಪುತ್ರಿ ಮೇಘನಾ ಮಾಹಿತಿ ನೀಡಿದ್ದಾರೆ.

ಕನ್ನಡದಲ್ಲಿ ವಿಜ್ಞಾನ ಅಂಕಣಗಳಿಗೆ ಖ್ಯಾತರಾಗಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ.

ತೀವ್ರ ಹೃದಯಾಘಾತವಾಗಿ Hypoxic ischemic encephalopathy ಗೆ ತುತ್ತಾದ ಸುಧೀಂದ್ರ: ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್​ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಈಡಾಗಿದ್ದ ಅವರು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುಧೀಂದ್ರ ಹಾಲ್ದೊಡ್ಡೇರಿ ಕೊನೆಯುಸಿರೆಳೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆಯಲ್ಲಿದ್ದ ಹಾಲ್ದೊಡ್ಡೇರಿ ಸುಧೀಂದ್ರ (Sudhindra Haldodderi) ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿತ್ತು. ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ ಅವರಿಗೆ ಪ್ರಜ್ಞೆ ಇಲ್ಲವಾಗಿತ್ತು. ಹಾಲ್ದೊಡ್ಡೇರಿ ಸುಧೀಂದ್ರ ಅವರಿಗೆ ಕೆಲ ದಿನಗಳ ಹಿಂದೆ ಯಾವ ಪ್ರಮಾಣದ ಹೃದಯಾಘಾತವಾಗಿತ್ತೆಂದರೆ ಅವರ ಮೆದುಳಿಗೆ ಆಕ್ಸಿಜನ್​ ಸರಬರಾಜು ಆಗುವುದು ನಿಂತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದೆ (Hypoxic ischemic encephalopathy -HIE) ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಖ್ಯಾತ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ ನಿಧನ:  ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಖ್ಯಾತ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ (59) ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸುಧೀಂದ್ರ ನಿಧನಕ್ಕೆ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಸಂತಾಪ:

(Former Scientist Science Writer Sudhindra Haldodderi died due to Hypoxic ischemic encephalopathy body donation)

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್​ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ? 

Sudhindra Haldodderi: ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿಗೆ ತೀವ್ರ ಅನಾರೋಗ್ಯ; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 3:55 pm, Fri, 2 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ