ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಬೆಂಗಳೂರು: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಹಾಗೂ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಮುಂಜಾನೆ 2.30ರ ಸುಮಾರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ತಿಳಿಸಿದ್ದಾರೆ. ಒಂದು ವರ್ಷದಿಂದಲೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಏ.30 ರಂದು ಹಳೇ ಏರ್‌ಪೋರ್ಟ್‌ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ಇಂದು ಸಂಜೆ 4 ಗಂಟೆಗೆ ಮುತ್ತಪ್ಪ ರೈ ಅಂತ್ಯಕ್ರಿಯೆ ನಡೆಯಲಿದ್ದು, ಈ ವೇಳೆ […]

ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

Updated on: May 19, 2020 | 4:07 PM

ಬೆಂಗಳೂರು: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಹಾಗೂ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಮುಂಜಾನೆ 2.30ರ ಸುಮಾರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ತಿಳಿಸಿದ್ದಾರೆ.

ಒಂದು ವರ್ಷದಿಂದಲೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಏ.30 ರಂದು ಹಳೇ ಏರ್‌ಪೋರ್ಟ್‌ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ಇಂದು ಸಂಜೆ 4 ಗಂಟೆಗೆ ಮುತ್ತಪ್ಪ ರೈ ಅಂತ್ಯಕ್ರಿಯೆ ನಡೆಯಲಿದ್ದು, ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೇರೆ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅವಕಾಶವಿಲ್ಲ.

Published On - 6:32 am, Fri, 15 May 20