ಪ್ರಬಲ ಜಾತಿಗೆ ಹಿಂದುಳಿದ ವರ್ಗದ 2ಎ ಮೀಸಲಾತಿ ಬೇಡ: ಮುಖ್ಯಮಂತ್ರಿಗೆ ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪಂಚಮಸಾಲಿ ಲಿಂಗಾಯತರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವೇಳೆ ಅತಿ ಹಿಂದುಳಿದ ವರ್ಗಗಳ ವೇದಿಕೆ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿ ಪ್ರಬಲ ಸಮುದಾಯಗಳಿಗೆ 2ಎ ಮೀಸಲಾತಿ ಕೊಡಬಾರದು ಎಂಬ ಒತ್ತಾಯ ಮಾಡಿದೆ.

ಪ್ರಬಲ ಜಾತಿಗೆ ಹಿಂದುಳಿದ ವರ್ಗದ 2ಎ ಮೀಸಲಾತಿ ಬೇಡ: ಮುಖ್ಯಮಂತ್ರಿಗೆ ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ
ಪ್ರಬಲ ಜಾತಿಗೆ ಹಿಂದುಳಿದ ವರ್ಗದ 2A ಮೀಸಲಾತಿ ಬೇಡ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 09, 2021 | 9:11 PM

ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯವೂ ಸೇರಿದಂತೆ ಹಲವಾರು ಸಮುದಾಯಗಳು ಹಿಂದುಳಿದ ವರ್ಗಗಳಿಗಿರುವ ಮೀಸಲಾತಿ ಕೊಡಬೇಕು ಎಂಬ ಹಕ್ಕೊತ್ತಾಯ ಇಟ್ಟುಕೊಂಡು ಹೋರಾಟ ಮಾಡುತ್ತಿರುವ ಹೊತ್ತಿನಲ್ಲಿಯೇ, ಪ್ರಬಲ ಜಾತಿಗಳನ್ನು 2 (ಎ) ಸಮುದಾಯಕ್ಕೆ ಸೇರ್ಪಡೆ ಮಾಡಬಾರದು ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸುವಂತೆ ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹಪಡಿಸಿದೆ. ಮುಖ್ಯಮಂತ್ರಿ ಚಂದ್ರು ಹಾಗೂ ವೇದಿಕೆ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್‌ ನೇತೃತ್ವದ ಅತಿ ಹಿಂದುಳಿದ ವರ್ಗಗಳ ನಿಯೋಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಮನವಿ ನೀಡುವ ಸಂದರ್ಭದಲ್ಲಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಪ್ರವರ್ಗ 2 (ಎ) ನಲ್ಲಿರುವ 102 ಅತಿ ಹಿಂದುಳಿದ ಜಾತಿ ವರ್ಗಗಳು ಒಂದಾಗಿ ಈ ಮನವಿಯನ್ನು ನೀಡುತ್ತಿದ್ದೇವೆ. ಪ್ರವರ್ಗ 2 (ಎ)ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಈಗಾಗಲೇ ಪ್ರವರ್ಗ 2 (ಎ)ದಲ್ಲಿರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂಧರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿಗಳಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರವರ್ಗ ೨(ಎ) ದಲ್ಲಿರುವ ಅತಿ ಹಿಂದುಳಿದ ಜಾತಿಗಳ ಅಸ್ತಿತ್ವ ಮತ್ತು ಆಸ್ಮಿತೆ ಕಾಪಾಡುವ ನಿರ್ಧಾರ ತಗೆದುಕೊಳ್ಳುವಂತೆ ಮನವಿ ಮಾಡಿದರು.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2 (ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2 (ಎ)ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ ಎಂದು ಹೇಳಿದರು.

ಸುದರ್ಶನ್​ ಹೇಳಿದ್ದೇನು? ವೇದಿಕೆಯ ಗೌರವ ಸಲಹೆಗಾರರಾದ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಮಾತನಾಡಿ, ಕಳೆದ ಕೆಲವು ದಿನಗಳಿಂದಲೂ ತಮ್ಮನ್ನು ಪ್ರವರ್ಗ 2 (ಎ)ಗೆ ಸೇರಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ತರುವ ಹೋರಾಟವನ್ನು ಹಮ್ಮಿಕೊಂಡಿರುವ ‘ವೀರಶೈವ ಪಂಚಮಸಾಲಿ’ ಸಮುದಾಯ ಮತ್ತು ಇವರ ಹಾದಿಯಲ್ಲೇ ಹೊರಟ ಇತರೇ ಪ್ರಭಾವಿ ಸಮುದಾಯಗಳ ಒತ್ತಡವನ್ನು ಗಮನಿಸಿದರೆ ಈ ರಾಜ್ಯದಲ್ಲಿ ನಮ್ಮಂತಹ ಸಣ್ಣಪುಟ್ಟ ಸಮುದಾಯಗಳ ಭವಿಷ್ಯ ಅತ್ಯಂತ ಧಾರುಣವಾಗುವ ಸೂಚನೆಗಳು ಕಾಣುತ್ತಿವೆ. ಪ್ರವರ್ಗ 2 (ಎ) ನಲ್ಲಿ ಶೇ 15 ಮೀಸಲಾತಿ ಇದ್ದು ಇದನ್ನು 102 ಅತಿ ಹಿಂದುಳಿದ ಸಮುದಾಯಗಳು ಹಂಚಿಕೊಳ್ಳಬೇಕಿದೆ. ಈ ಶೇ 15 ಮೀಸಲಾತಿ ಇನ್ನೂ ಅರ್ದದಷ್ಟು ಧ್ವನಿಯೇ ಇಲ್ಲದ ಸಮುದಾಯಗಳಿಗೂ ತಲುಪಿಲ್ಲ. ಆಶ್ಚರ್ಯವೆಂದರೆ ಇಲ್ಲಿನ ಅನೇಕ ಸಮುದಾಯಗಳಿಗೆ ಇಷ್ಟು ದಶಕಗಳಲ್ಲಿ ಒಮ್ಮೆಯೂ ಮೀಸಲಾತಿ ಸೌಲಭ್ಯ ದೊರೆತಿಲ್ಲ. ಇದರ ಬಗ್ಗೆ ತಮ್ಮ ಆಯೋಗ ಜಾತಿವಾರು ಸಮೀಕ್ಷೆಗಾಗಿ ಸಂಗ್ರಹಿಸಿರಬಹುದಾದ ದ್ವಿತೀಯ ಮೂಲದ (secondary source of information) ಮಾಹಿತಿಯನ್ನು ದಯವಿಟ್ಟು ಗಮನಿಸಬಹುದು ಎಂದರು.

ದ್ವಾರಕಾನಾಥ್ ಅಭಿಪ್ರಾಯ ಇಲ್ಲಿದೆ ನೋಡಿ ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್.ದ್ವಾರಕಾನಾಥ್‌ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದ ಮೇಲೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಅಸ್ತಿತ್ವದಲ್ಲಿ ಇರುವಾಗ ಈಗಿನ ಮೀಸಲಾತಿ ಗೊಂದಲದ ಬಗ್ಗೆ ಮತ್ತೊಂದು “ಉನ್ನತ ಮಟ್ಟದ ಸಮಿತಿ”ಯನ್ನು ಸರ್ಕಾರ ಮಾಡಹೊರಟಿರುವುದು ಅನೈತಿಕ ಮತ್ತು ಅನಾವಶ್ಯಕ. ಈಗಿನ ಮೀಸಲಾತಿ ಗೊಂದಲವನ್ನು ಸದರಿ ಆಯೋಗವೇ ಪರಿಹರಿಸಬೇಕೆಂಬುದು ನಮ್ಮ ಆಶಯ. ಈ ಕಾರಣಕ್ಕೆ ಸದರಿ ಸಮಿತಿಯನ್ನು ಈ ಕೂಡಲೇ ರದ್ದು ಪಡಿಸಬೇಕೆಂದು ಸರ್ಕಾರವನ್ನು ನಮ್ರವಾಗಿ ಒತ್ತಾಯಿಸುತ್ತೇವೆ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಏಕೈಕ ಮಾರ್ಗ ಸರ್ಕಾರದ ಮುಂದಿರುವುದೆಂದರೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ ‘ಜಾತೀವಾರು ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯನ್ನು (socio economical and educational survey) ಸ್ವೀಕರಿಸಿ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು. ಆಯೋಗ ನೀಡಿರುವ ಅಂಕಿಅಂಶಗಳ ಆಧಾರದ ಮೇಲೆ ಈಗಿರುವ ಪಟ್ಟಿಗಳನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ಪಟ್ಟಿಗಳನ್ನು ರೂಪಿಸಬೇಕು ಎಂದು ಹೇಳಿದರು.

ವೇದಿಕೆಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಪಿ.ಆರ್‌.ರಮೇಶ್‌ ಮಾತನಾಡಿ, ಇದು ಪ್ರವರ್ಗ 2 (ಎ)ನಲ್ಲಿರುವ ಅತಿ ಹಿಂದುಳಿದ, ಅಸಹಾಯಕ, ಅಸಂಘಟಿತ ಜಾತಿಗಳ ಜೀವನ್ಮರಣದ ಪ್ರಶ್ನೆ, ಹಾಗೇನಾದರೂ ಸರ್ಕಾರ ಬಲಿಷ್ಟರ ನ್ಯಾಯಬದ್ದವಲ್ಲದ ಒತ್ತಾಯಕ್ಕೆ ಮಣಿದರೆ ಇದು ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ ಎಂದು ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ. ಬಲಿಷ್ಟರ ಈ ಅನ್ಯಾಯದ ಬೇಡಿಕೆಯನ್ನು ತೀವ್ರವಾಗಿ ವಿರೋಧಿಸುವ ನಾವು, ವೈಜ್ಞಾನಿಕವಾಗಿ, ನ್ಯಾಯಬದ್ದವಾಗಿ, ಸಾಂಪ್ರದಾಯಿಕವಾಗಿ ನಮಗೆ ದಕ್ಕಿರುವ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಮ್ಮ ಸಮುದಾಯಗಳಿಗೆ ರಕ್ಷಣೆ ನೀಡಿ ಸಾಮಾಜಿಕ ನ್ಯಾಯ ದಯಪಾಲಿಸಬೇಕೆಂದು ಕಳಕಳಿಯಿಂದ ಮನವಿ ಮಾಡುತ್ತೇವೆ. ಸರ್ಕಾರವು ನಮ್ಮ ನೈತಿಕ ಮತ್ತು ನ್ಯಾಯಬದ್ದ ಮನವಿಯನ್ನು ಮಾನ್ಯ ಮಾಡದಿದ್ದರೆ ಪ್ರವರ್ಗ 2 (ಎ) ಪಟ್ಟಿಯಲ್ಲಿರುವ ಎಲ್ಲಾ 102 ಜಾತಿವರ್ಗಗಳು ಸಂಘಟಿತವಾಗಿ ಬೀದಿಗಿಳಿದು ರಾಜ್ಯಾದ್ಯಂತ ಹೋರಾಟ ಮಾಡುವುದು ಅನಿವಾರ್ಯ ಎಂದು ಈ ಮೂಲಕ ನಮ್ರವಾಗಿ ಎಚ್ಚರಿಸುತ್ತಿದ್ದೇವೆ ಎಂದು ಹೇಳಿದರು.

ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ವೇದಿಕೆಯ ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್.ದ್ವಾರಕಾನಾಥ್, ಪ್ರೊ.ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ.ನಂಜುಂಡಿ, ಪ್ರಧಾನ ಕಾರ್ಯದರ್ಶಿಗಳಾದ ಎಸ್‌.ಆರ್‌.ಯಲ್ಲಪ್ಪ, ವೇದಿಕೆಯ ಉಪಾಧ್ಯಕ್ಷ ರಾದ ಡಾ.ಜಿ.ರಮೇಶ್, ಹೆಚ್.ಸುಬ್ಬಣ್ಣ, ಸಿ.ನಂಜಪ್ಪ, ಬಿ.ವೆಂಕಟೇಶ್, ಬಸವರಾಜು ಉಪಸ್ಥಿತರಿದ್ದರು.

ಅತಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುದಾನದ ಭರವಸೆ: ಸಿಎಂ ತಮ್ಮನ್ನು ಭೇಟಿಯಾದ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್​ ನಲ್ಲಿ ಘೋಷಣೆ ಮಾಡಿರುವ ಅನುದಾನದ ಜೊತೆಗೆ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುದಾನ ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಮಾತು ಮಾರ್ಚ್‌ 24ರಿಂದ ಪ್ರವರ್ಗ ೨(ಎ) ಗೆ ಸೇರಿಸುವಂತೆ ಮನವಿ ಮಾಡಿರುವ ಹಾಗೂ ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ಎಲ್ಲಾ ಜಾತಿಗಳು ಹಾಗೂ ಸಂಘಟನೆಗಳ ಮುಖಂಡರುಗಳ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಂವಿಧಾನಾತ್ಮಕವಾದ ವರದಿಯನ್ನು ಸರಕಾರಕ್ಕೆ ನೀಡುವ ಭರವಸೆ ನೀಡಿದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಹೋರಾಟ: ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಇದನ್ನೂ ಓದಿ: ಸದ್ಯಕ್ಕೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸಾಧ್ಯವೇ ಇಲ್ಲ: ಸಚಿವರ ಸ್ಪಷ್ಟನೆ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ