7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೆರವೇರಿದ ಶಂಕುಸ್ಥಾಪನೆ, ಜಿ.ಪಂ ಸಿಇಒ ಉಸ್ತುವಾರಿ

ರಾಜ್ಯದಲ್ಲಿ 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಕೊಠಡಿಗಳ ನಿರ್ಮಾಣದ ಉಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸಲಾಗಿದೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೆರವೇರಿದ ಶಂಕುಸ್ಥಾಪನೆ, ಜಿ.ಪಂ ಸಿಇಒ ಉಸ್ತುವಾರಿ
ಶಿಕ್ಷಣ ಸಚಿವ ಬಿಸಿ ನಾಗೇಶ್​​
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 15, 2022 | 5:16 PM

ಬೆಂಗಳೂರು: ರಾಜ್ಯದಲ್ಲಿ 7,601 ಶಾಲಾ ಕೊಠಡಿಗಳ (School rooms) ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಕೊಠಡಿಗಳ ನಿರ್ಮಾಣದ ಉಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸಲಾಗಿದೆ ಎಂದು ವಿಧಾನಸೌಧದಲ್ಲಿ (Vidhana soudha) ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ 250 ಶೌಚಾಲಯಗಳ ನಿರ್ಮಾಣಕ್ಕೆ ನಿನ್ನೆ (ನ.14) ರಂದು ಸೂಚನೆ ನೀಡಿದ್ದೇವೆ. ಹೈದರಾಬಾದ್ ಕರ್ನಾಟಕದಲ್ಲಿ 900 ಶಾಲಾ ಕೊಠಡಿ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಸಂಬಂಧ ಸಿಇಟಿ ಪರೀಕ್ಷೆ ಮುಗಿದಿದೆ. ನೇಮಕಗೊಂಡ ಶಿಕ್ಷಕರಿಗೆ ತರಬೇತಿ ನೀಡಿ ಕೂಡಲೆ ಶಾಲೆಗಳಿಗೆ ನೇಮಿಸುತ್ತೇವೆ. ಮೌಲ್ಯಾಧಾರಿತ ಶಿಕ್ಷಣ ನೀಡಲು ಎರಡು ಕೊರತೆಗಳನ್ನು ನೀಗಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ರೀತಿಯ ಬಣ್ಣ ಬಳಿಯಬೇಕು ಅಂತಾ ಸುತ್ತೋಲೆ ಹೊರಡಿಸಿಲ್ಲ

ನೂತನ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರವಾಗಿ ಮಾತನಾಡಿದ ಅವರು ಇದೇ ರೀತಿಯ ಬಣ್ಣ ಬಳಿಯಬೇಕು ಅಂತಾ ಸುತ್ತೋಲೆ ಹೊರಡಿಸಿಲ್ಲ. ಅಲ್ಲಿನ ವಾತಾವರಣಕ್ಕೆ ತಕ್ಕಂತೆ ಕೊಠಡಿ ನಿರ್ಮಿಸಿ ಎಂದು ಹೇಳಿದ್ದೇವೆ. ಹಾಗೆ ಶಾಲಾ ಕೊಠಡಿಗಳಿಗೆ ‘ವಿವೇಕ’ ಎಂದು ಹೆಸರಿಡಿ ಎಂದಿದ್ದೇವೆ. ಖಾಸಗಿ ಶಾಲೆಗಳಲ್ಲಿ ಕೇಸರಿ ಬಣ್ಣ ಬಳಿಯೋದು ಅವರಿಗೆ ಬಿಟ್ಟದ್ದು. ಈಗಾಗಲೇ ವಿವೇಕಾನಂದರ ಭಾವಚಿತ್ರ ಕೆಲವು ಶಾಲೆಗಳಲ್ಲಿವೆ. ಎಲ್ಲಾ ಶಾಲೆಗಳಲ್ಲೂ ವಿವೇಕಾನಂದರ ಭಾವಚಿತ್ರ ಹಾಕಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಜ್ಞಾನ ಸಂಪಾದನೆ, ಮಾಡಲ್ಸ್​​ಗಾಗಿ ವಿವೇಕ ಶಾಲೆಗಳ ಸ್ಥಾಪನೆ ಮಾಡಲಾಗಿದೆ. ಕೊಠಡಿ ಸಹಿತ ಒಳ್ಳೆಯ ವಾತವರಣ ನಿರ್ಮಿಸಬೇಕು. ಇದಕ್ಕಾಗಿ ಹತ್ತು ವರ್ಷಗಳಲ್ಲಿ ಎಲ್ಲಾ ಕೊಠಡಿಗಳನ್ನು ನಿರ್ಮಿಸಲು ಗುರಿ ಇದೆ. 2 ಕಿಮೀ ಒಳಗೆ ಒಂದು ಸರ್ಕಾರಿ ಶಾಲೆ ಇರಬೇಕೆಂದು ನಿಯಮ ಇದೆ. ಕನಿಷ್ಟ ಇಬ್ಬರು ಶಿಕ್ಷಕರು ಪ್ರತಿ ಶಾಲೆಗೆ ಇರಬೇಕು ಎಂದು ನುಡಿದರು.

ಕಾಂಗ್ರೆಸ್ ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡುತ್ತಿದೆ

ಕಾಂಗ್ರೆಸ್ ಶಿಕ್ಷಣ ಕ್ಷೇತ್ರದಲ್ಲೂ ಅನವಶ್ಯಕ ರಾಜಕೀಯ ಮಾಡುತ್ತಿದೆ. ವಿರೋಧ ಮಾಡಿಸುವುದಕ್ಕೆ ಒಂದಿಷ್ಟು ಜನರು ಇದ್ದಾರೆ. ವೋಟ್ ಬ್ಯಾಂಕ್​ಗಾಗಿ ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಒಂದು ಧರ್ಮದ ವೋಟ್​ಗಾಗಿ ಈ ರೀತಿ ವಿರೋಧ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Tue, 15 November 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ