ದಾವಣಗೆರೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಜಪ್ತಿ, ನಾಲ್ವರ ಬಂಧನ
ಬಂಧಿತರಿಂದ 5 ಚೀಲಗಳಲ್ಲಿ ಸಂಗ್ರಹಿಸಿದ್ದ 10,000 ಜಿಲೆಟಿನ್ ಕಡ್ಡಿ, 7,400 ಎಲೆಕ್ಟ್ರಿಕ್ ಡಿಟೋನೇಟರ್, 50 ಕೆಜಿ ಅಮೋನಿಯಂ ನೈಟ್ರೇಟ್ ಪೌಡರ್ ಸೇರಿ ಸುಮಾರು ಒಟ್ಟು 3 ಲಕ್ಷ 62 ಸಾವಿರ ಮೌಲ್ಯದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಮ್ಯಾಗಜಿನ್ ಮಾಲೀಕ ಮುಜಿಬ್ ಷಣ್ಮುಖಪ್ಪರ ಮೇಲೆ ಪ್ರಕರಣ ದಾಖಲಾಗಿದೆ. ದಾವಣಗೆರೆ ಡಿವೈಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದಾವಣಗೆರೆ: ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ದಾವಣಗೆರೆ ನಗರದ ಕಾಡಜ್ಜಿಯ ಬಳಿ ವಶಕ್ಕೆ ಪಡೆಯಲಾಗಿದೆ. DySP ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದು ಸ್ಫೋಟಕ ಸಾಗಿಸುತ್ತಿದ್ದ ವಿಕ್ರಮ್, ನಾಗರಾಜ್, ಮಂಜುನಾಥ್, ವಿಜಯ್‌ಕುಮಾರ್‌ನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಚೀಲಗಳಲ್ಲಿ ಸಂಗ್ರಹಿಸಿದ್ದ 10,000 ಜಿಲೆಟಿನ್ ಕಡ್ಡಿ, 7,400 ಎಲೆಕ್ಟ್ರಿಕ್ ಡಿಟೋನೇಟರ್, 50 ಕೆಜಿ ಅಮೋನಿಯಂ ನೈಟ್ರೇಟ್ ಪೌಡರ್ ಸೇರಿ ಸುಮಾರು ಒಟ್ಟು 3 ಲಕ್ಷ 62 ಸಾವಿರ ಮೌಲ್ಯದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಮ್ಯಾಗಜಿನ್ ಮಾಲೀಕ ಮುಜಿಬ್ ಷಣ್ಮುಖಪ್ಪರ ಮೇಲೆ ಪ್ರಕರಣ ದಾಖಲಾಗಿದೆ. ದಾವಣಗೆರೆ ಡಿವೈಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಇನ್ನು ಈ ಹಿಂದೆ ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ ಜಿಲೆಟಿನ್ ಸ್ಫೋಟ ಇಡೀ ಕರ್ನಾಟಕ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಸ್ಫೋಟದಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಅಕ್ರಮವಾಗಿ ಜಿಲೆಟಿನ್ ಸ್ಫೋಟಕಗಳನ್ನು ಬಳಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ: Chikkaballapura Gelatin Blast | ಶಿವಮೊಗ್ಗ ಸ್ಫೋಟ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ, ಐವರ ಸಾವು