ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದ ನಾಲ್ವರ ಬಂಧನ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 24, 2021 | 5:43 PM

ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಸೆರೆ ಹಿಡಿದ್ದಾರೆ. ಬಂಧಿತ ಆರೋಪಿಗಳಿಂದ ಸ್ಕಿಮ್ಮಿಂಗ್ ಮಷೀನ್, ಕ್ಯಾಮರಾ, ಕಾರ್ಡ್ ರೀಡರ್, ನಕಲಿ ಎಟಿಎಂ ಕಾರ್ಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದ ನಾಲ್ವರ ಬಂಧನ
ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆ ಮಾಡುತ್ತಿದ್ದ ವ್ಯಕ್ತಿಗಳು ಪೊಲೀಸರಿಂದ ಸೆರೆ
Follow us on

ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳ ಮೂಲದ ಮೂವರು ವಂಚಕರು ಹಾಗೂ ದೆಹಲಿ ಮೂಲದ ಓರ್ವನನ್ನು ಸೆರೆ ಹಿಡಿಯಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗ್ಲಾಡಿವಿನ್ ಜಿಂಟೋ ಜಾಯ್, ದಿನೇಶ್ ಸಿಂಗ್ ರಾವತ್, ಅಬ್ದುಲ್ ಮಜೀದ್, ರಾಹುಲ್ ಬಂಧಿತ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸ್ಕಿಮ್ಮಿಂಗ್ ಮಷೀನ್, ಕ್ಯಾಮರಾ, ಕಾರ್ಡ್ ರೀಡರ್, ನಕಲಿ ಎಟಿಎಂ ಕಾರ್ಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನ ವೇಳೆ ಪರಾರಿಯಾಗಲು ಯತ್ನಿಸಿದ್ದರಿಂದ ಓರ್ವನಿಗೆ ಗಾಯವಾಗಿದೆ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನವೆಂಬರ್​ನಿಂದ ಈವರೆಗೆ 60ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಕಿಮ್ಮಿಂಗ್ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದಲ್ಲೇ ಒಟ್ಟು 22 ಪ್ರಕರಣ ದಾಖಲಾಗಿದೆ. ನಿವೃತ್ತ ನೌಕರರು, ವ್ಯವಹಾರಸ್ಥರ ಅಕೌಂಟ್​ಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುತ್ತಮುತ್ತಲ ಜಿಲ್ಲೆ, ಹೊರ ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣ ನಡೆದಿದೆ. 30 ಲಕ್ಷಕ್ಕೂ ಹೆಚ್ಚು ಹಣ ಲಪಟಾಯಿಸಿರುವುದು ತಿಳಿದು ಬಂದಿದೆ. ಆರೋಪಿಗಳು ಸ್ಥಳೀಯವಾಗಿ ಗುಂಪು ಕಟ್ಟಿಕೊಂಡು ಕೃತ್ಯ ಮಾಡುತ್ತಿದ್ದರು. ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆಗೆ ಯತ್ನಿಸಿದ್ದ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ

ಇದನ್ನೂ ಓದಿ: ATM Theft | ಎಟಿಎಂಗೆ ತುಂಬಬೇಕಿದ್ದ ಹಣ ಎಗರಿಸಿ ಅತ್ತೆ ಮಗಳ ಜತೆ ಎಸ್ಕೇಪ್ ಆಗಿದ್ದ ಖದೀಮ ಅರೆಸ್ಟ್

ಇದನ್ನೂ ಓದಿ: ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆಗೆ ಯತ್ನ