ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ಮಕ್ಕಳೆಲ್ಲಾ ಬಾಗೇಪಲ್ಲಿ ತಾಲೂಕಿನ ಉದವಾರಪಲ್ಲಿ ನಿವಾಸಿಗಳಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.