AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕೊರತೆಯಿಂದ ಕಲಬುರಗಿ ಆಸ್ಪತ್ರೆಯಲ್ಲಿ ಇಬ್ಬರು ಕೊರೊನಾ ಸೋಂಕಿತರ ಸಾವು

ಜೀವರಕ್ಷಕ ವ್ಯವಸ್ಥೆಯಲ್ಲಿದ್ದವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಆಸ್ಪತ್ರೆ ಸಿಬ್ಬಂದಿ ಯತ್ನಿಸುತ್ತಿದ್ದರು. ಆದರೆ, ಬೇರೊಂದು ಆಸ್ಪತ್ರೆಗೆ ತಲುಪುವ ಮೊದಲೇ ವೆಂಟಿಲೇಟರ್​ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಕಲಬುರಗಿ ಆಸ್ಪತ್ರೆಯಲ್ಲಿ ಇಬ್ಬರು ಕೊರೊನಾ ಸೋಂಕಿತರ ಸಾವು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:May 01, 2021 | 10:41 PM

Share

ಕಲಬುರಗಿ: ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಸೋಂಕಿತರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಒಟ್ಟು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಇದೀಗ ಸ್ಪಷ್ಟನೆ ನೀಡಿರುವ ಕೆಬಿಎನ್ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಫಾರೂಕ್, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಯಿಂದ ಓರ್ವ ವ್ಯಕ್ತಿ ಮಾತ್ರ ಸತ್ತಿದ್ದಾರೆ. ಮತ್ತೋರ್ವ ವ್ಯಕ್ತಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವಾಗ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬದಲಾವಣೆ ಮಾಡುವಾಗ ತೊಂದರೆಯಾಗಿದ್ದರಿಂದ ಈ ರೀತಿಯ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಕುರಿತು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಆಕ್ಸಿಜನ್​ ಖಾಲಿಯಾಗಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ಆಕ್ಸಿಜನ್ ಕೊರತೆ ಬಗ್ಗೆ ಆಸ್ಪತ್ರೆಯವರು ಮಾಹಿತಿ ನೀಡಿರಲಿಲ್ಲ. ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳದಿದ್ದರಿಂದ ಇಂಥ ಘಟನೆ ಸಂಭವಿಸಿದೆ’ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಸದ್ಯ ಆಕ್ಸಿಜನ್ ಕೊರತೆ ಇಲ್ಲ. ಇದೀಗ ಸ್ಥಳಕ್ಕೆ ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸಲಿದೆ. ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವುದು ಗಮನಕ್ಕೆ ಬಂದರೆ ಕೋವಿಡ್ ಆಸ್ಪತ್ರೆಯ ಪರವಾನಗಿ ರದ್ದು ಮಾಡುತ್ತೇವೆ ಎಂದರು.

ದೇಶದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರಗತಿಯಲ್ಲಿ ಹರಡಲು ಆರಂಭವಾದ ಮೇಲೆ ವೈದ್ಯಕೀಯ ಆಮ್ಲಜನಕದ ಬೇಡಿಕೆಯೂ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಂದಾಗಿ ರೋಗಿಗಳು ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ.

ಕಳೆದ 15 ದಿನಗಳಿಂದ ರಾಷ್ಟ್ರದ ರಾಜಧಾನಿಯಲ್ಲಿ ಕೊವಿಡ್​-19 ಪ್ರಕರಣಗಳ ಸಂಖ್ಯೆ ತ್ವರಿತವಾಗಿ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್​ಗಳ ತೀವ್ರ ಕೊರತೆ ತಲೆದೋರಿದೆ. ಸಾವುಗಳ ಸಂಖ್ಯೆ ಸಹ ವಿಪರೀತವಾಗಿದ್ದು ಚಿತಾಗಾರಗಳ ಮುಂದೆ ಅಂಬ್ಯುಲೆನ್ಸ್​ಗಳು ಸಾಲುಗಟ್ಟಿರುವುದು ಸಾಮಾನ್ಯ ದೃಶ್ಯವಾಗಿದೆ. ಕೆಲ ದಿನಗಳಿಂದ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ಆಕ್ಸಿಜನ್ ಸಿಲಿಂಡರ್​ಗಳ ಕೊರತೆ ಎದುರಿಸುತ್ತಿವೆ.

ಆಕ್ಸಿಜನ್ ಕೊರತೆ: ದೆಹಲಿಯಲ್ಲಿ 12 ಸೋಂಕಿತರ ಸಾವು ಶನಿವಾರದಂದು ವೈದ್ಯಕೀಯ ಆಕ್ಸಿಜನ್ ಕೊರತೆಯಿಂದಾಗಿ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ 12 ಸೋಂಕಿತರು ಮತ್ತೊಬ್ಬ ಡಾಕ್ಟರ್ ಬಲಿಯಾಗಿದ್ದಾರೆ. ‘ಚಿಂತಾಜನಕದ ಸ್ಥಿತಿಯಲ್ಲಿರುವ ಇನ್ನೂ 5 ರೋಗಿಗಳನ್ನು ಕೃತಕ ಉಸಿರಾಟದ ಮೂಲಕ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಾತ್ರಾ ಆಸ್ಪತ್ರೆಯ ನಿರ್ದೇಶಕ ಎಸ್.ಸಿ.ಗುಪ್ತಾ ಹೇಳಿದ್ದಾರೆ.

(Four Coronavirus Infected on Ventilator Died due to Oxygen Problem in Kalaburgi)

ಇದನ್ನೂ ಓದಿ: ರೈಲ್ವೆ ಸಿಬ್ಬಂದಿಗೂ ತಟ್ಟಿದ ಆಕ್ಸಿಜನ್ ಕೊರತೆಯ ಬಿಸಿ; ವಿಭಾಗೀಯ ಆಸ್ಪತ್ರೆಯಲ್ಲಿ ಆತಂಕ

ಇದನ್ನೂ ಓದಿ: ಕೊರೊನಾ ಸೋಂಕಿತನ ನರಳಾಟದ ಸಾವು ಕಂಡು ಹೃದಯಾಘಾತದಿಂದ ಮೃತಪಟ್ಟ ಕಲಬುರ್ಗಿ ಕಾನ್ಸ್​ಟೇಬಲ್

Published On - 9:30 pm, Sat, 1 May 21