Accident: ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಡಿಕ್ಕಿ; ಸ್ಥಳದಲ್ಲೇ ನಾಲ್ವರ ಸಾವು

ರಾತ್ರಿ ಒಂದು ಗಂಟೆ ಸಮಯದಲ್ಲಿ ಟ್ಯಾಂಕರ್ ಮತ್ತು ಕಾರಿನ ನಡುವೆ ದುರಂತ ಸಂಭವಿಸಿದೆ. ಕಾರು ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿತ್ತು. ಹಾಗೂ ಟ್ಯಾಂಕರ್ ಕಲಬುರಗಿಯಿಂದ ಜೇವರ್ಗಿ ಕಡೆ ತೆರಳುತ್ತಿತ್ತು.

Accident: ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಡಿಕ್ಕಿ; ಸ್ಥಳದಲ್ಲೇ ನಾಲ್ವರ ಸಾವು
ಪ್ರಾತಿನಿಧಿಕ ಚಿತ್ರ

ಕಲಬುರಗಿ: ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಕೋಟನೂರು ಬಳಿ ನಡೆದಿದೆ. ಕಲಬುರಗಿ ನಗರದ ನಿವಾಸಿಗಳಾದ ರಾಹುಲ್(25), ಖಾಸಿಂ(26), ಉಲ್ಲಾಸ್(26) ಸೇರಿ ನಾಲ್ವರ ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾತ್ರಿ ಒಂದು ಗಂಟೆ ಸಮಯದಲ್ಲಿ ಟ್ಯಾಂಕರ್ ಮತ್ತು ಕಾರಿನ ನಡುವೆ ದುರಂತ ಸಂಭವಿಸಿದೆ. ಕಾರು ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿತ್ತು. ಹಾಗೂ ಟ್ಯಾಂಕರ್ ಕಲಬುರಗಿಯಿಂದ ಜೇವರ್ಗಿ ಕಡೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರ ಗುರುತು ಪತ್ತೆಯಾಗಿದೆ. ಇನ್ನೋರ್ವ ಮೃತನ ಗುರುತು ಪತ್ತೆ ಮಾಡಲಾಗುತ್ತಿದೆ. ಕಲಬುರಗಿ ನಗರ ಸಂಚಾರಿ 2 ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Bus Accident: ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ; 30 ಜನರು ಸಾವು, 40 ಜನರಿಗೆ ಗಂಭೀರ ಗಾಯ