KSRTC ಬಸ್, ಕ್ರೂಸರ್ ಮುಖಾಮುಖಿ.. ಐವರ ದುರ್ಮರಣ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು 7 ಜನರಿಗೆ ಗಂಭೀರ ಗಾಯಗಳಾಗಿವೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಭೀಕರ ಘಟನೆ ಸಂಭವಿಸಿದೆ. KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು 7 ಜನರಿಗೆ ಗಂಭೀರ ಗಾಯಗಳಾಗಿವೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆ ಪರಿಣಾಮ ಕ್ರೂಸರ್‌ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. 7 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ: ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು
Published On - 6:53 am, Sun, 27 December 20