KSRTC ಬಸ್, ಕ್ರೂಸರ್ ಮುಖಾಮುಖಿ.. ಐವರ ದುರ್ಮರಣ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು 7 ಜನರಿಗೆ ಗಂಭೀರ ಗಾಯಗಳಾಗಿವೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

KSRTC ಬಸ್, ಕ್ರೂಸರ್ ಮುಖಾಮುಖಿ.. ಐವರ ದುರ್ಮರಣ
KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Dec 28, 2020 | 10:03 AM

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಭೀಕರ ಘಟನೆ ಸಂಭವಿಸಿದೆ. KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು 7 ಜನರಿಗೆ ಗಂಭೀರ ಗಾಯಗಳಾಗಿವೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆ ಪರಿಣಾಮ ಕ್ರೂಸರ್‌ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. 7 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊಳಕಾಲ್ಮೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ: ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು

Published On - 6:53 am, Sun, 27 December 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us