AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು: ಮೂರು ದಿನದಲ್ಲಿ ಮೈಸೂರಿನಲ್ಲಿ ಇಬ್ಬರು ಮೃತ

ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರನ್ನು ಕಾಡುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 175 ಡೆಂಗ್ಯೂ ಕೇಸ್ ದೃಢಪಟ್ಟಿದ್ದವು. ಇನ್ನು ಹುಬ್ಬಳ್ಳಿಯಲ್ಲಿ ಪಿಡಿಯಾರ್ಟಿಕ್ ವಾರ್ಡ್​​ನಲ್ಲಿ ಡೆಂಗ್ಯೂಯಿಂದ ನಾಲ್ವರು ಮೃತಪಟ್ಟಿದ್ದಾರೆ. ಮೂರು ದಿನದಲ್ಲಿ ಮೈಸೂರಿನಲ್ಲಿ ಡೆಂಗ್ಯೂಗೆ ಇಬ್ಬರು ಮೃತಪಟ್ಟಿದ್ದಾರೆ. ಇಂದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು: ಮೂರು ದಿನದಲ್ಲಿ ಮೈಸೂರಿನಲ್ಲಿ ಇಬ್ಬರು ಮೃತ
ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು: ಮೂರು ದಿನದಲ್ಲಿ ಮೈಸೂರಿನಲ್ಲಿ ಇಬ್ಬರು ಮೃತ
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 07, 2024 | 9:08 PM

Share

ಬೆಂಗಳೂರು, ಜುಲೈ 07: ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಜನರನ್ನ ಕಾಡುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 175 ಡೆಂಗ್ಯೂ ಕೇಸ್ ದೃಢಪಟ್ಟಿವೆ. ಬೆಂಗಳೂರಿನಲ್ಲೇ 115 ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ ಜನವರಿ 1ರಿಂದ ನಿನ್ನೆ ವರೆಗೆ ಒಟ್ಟು 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ 3 ದಿನಕ್ಕೆ ಇಬ್ಬರು ಸಾವನ್ನಪ್ಪಿದ್ದರೆ, ಹುಬ್ಬಳ್ಳಿಯಲ್ಲಿ (Hubballi) ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್​, ಪಿಡಿಯಾರ್ಟಿಕ್ ವಾರ್ಡ್​​ನಲ್ಲಿ ಡೆಂಗ್ಯೂಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್​ ಆಸ್ಪತ್ರೆಯ ಮೆಡಿಸನ್ ವಾರ್ಡ್​ನಲ್ಲಿ ಯಾವುದೇ ಸಾವು ಆಗಿಲ್ಲ. ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂಯಿಂದ ಯಾವುದೇ ಡೆತ್​​ ಆಗಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವಾಗಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಡೆಂಗ್ಯೂ ಅಬ್ಬರ; ರಾಜ್ಯದಲ್ಲಿ ಒಂದೇ ದಿನ 175 ಜನರಲ್ಲಿ ಡೆಂಗ್ಯೂ

ಮೆಡಿಸನ್ ವಾರ್ಡ್​ನ ಐಸಿಯುನಲ್ಲಿ ಇಬ್ಬರು ರೋಗಿಗಳು ಇದ್ದಾರೆ. ಪಿಡಿಯಾರ್ಟಿಕ್​ ವಾರ್ಡ್​​ನಲ್ಲಿ 18 ಮಕ್ಕಳು ಐಸಿಯುನಲ್ಲಿ ಇದ್ದಾರೆ. ಜನರು ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಶಾಸಕ ಮಹೇಶ್ ತೆಂಗಿನಕಾಯಿ ಹೇಳಿದ್ದಿಷ್ಟು 

ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಪ್ರತಿಕ್ರಿಯಿಸಿದ್ದು, ಕಿಮ್ಸ್​​ನಲ್ಲಿ ಹೆಚ್ಚು ರೋಗಿಗಳು ದಾಖಲಾದ ಹಿನ್ನೆಲೆ ಭೇಟಿ ನೀಡಿದ್ದೇವೆ. ಒಳ್ಳೆಯ ಚಿಕಿತ್ಸೆ ಸಿಗ್ತಿದೆ ಅಂತಾ ರೋಗಿಗಳ ಸಂಬಂಧಿಕರು ಹೇಳಿದ್ದಾರೆ. ಕೊವಿಡ್ ವೇಳೆ ಕಿಮ್ಸ್​ಗೆ ಬೇರೆ ಹೆಸರಿತ್ತು, ಈಗ ಬೇರೆ ಹೆಸರು ಇದೆ. ಕಿಮ್ಸ್ ಆಸ್ಪತ್ರೆಗೆ ಅಕ್ಕಪಕ್ಕದ ಜಿಲ್ಲೆಗಳಿಂದಲೂ ರೋಗಿಗಳು ಬರ್ತಿದ್ದಾರೆ. ಮಕ್ಕಳಲ್ಲಿ ಡೆಂಘೀ ಜ್ವರ ಹೆಚ್ಚು ಕಂಡು ಬರ್ತಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯ 82 ವಾರ್ಡ್​ಗಳಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಿದ್ದೇವೆ. ಫಾಗಿಂಗ್ ಯಂತ್ರ ಖರೀದಿ ಮಾಡಲು ಸರ್ಕಾರ ಹಣ ಕೊಡಬೇಕು ಎಂದರು.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿ ಆಗಿದೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಲಲಿತ ಎಂಬುವವರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಹುಣಸೂರು ಸಮುದಾಯದ ಆರೋಗ್ಯಧಿಕಾರಿ ಒಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಘೀ ಹೆಚ್ಚಳ; ಬೆಂಗಳೂರಿನಲ್ಲಿ ಬಾಲಕ ಸಾವು, ಝೀಕಾ ವೈರಸ್​ಗೆ ವೃದ್ಧ ಬಲಿ

ಜಿಲ್ಲೆಯ ನಂಜನಗೂಡಿನಲ್ಲಿ ಡೆಂಗ್ಯೂ, ಚಿಕೂನ್ ಗುನ್ಯಾ ಆತಂಕ ಶುರುವಾಗಿದ್ದು, ನಂಜನಗೂಡಿನಲ್ಲಿ 23 ಜನರಿಗೆ ಡೆಂಗ್ಯೂ, 9 ಜನರಿಗೆ ಚಿಕೂನ್ ಗುನ್ಯಾ ಕಾಣಿಸಿಕೊಂಡಿದೆ. ಹೀಗಾಗಿ ಶಾಸಕ ದರ್ಶನ್ ಧ್ರುವನಾರಾಯಣ, ತಹಶೀಲ್ದಾರ್ ಶಿವಕುಮಾರ್​, ಇಒ ಜೆರಾಲ್ಡ್ ರಾಜೇಶ್, ಟಿಹೆಚ್​ಒ ಡಾ.ಈಶ್ವರ್ ನೇತೃತ್ವದಲ್ಲಿ ಇಂದು ನಂಜನಗೂಡು ಟಿಹೆಚ್​ಒ ಕಚೇರಿಯ ಸಭಾಂಗಣದಲ್ಲಿ ಸಭೆ ಮಾಡಲಾಗಿದೆ.

ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಬಗ್ಗೆ ನಿಗಾ ವಹಿಸಬೇಕೆಂದು ಸಭೆಯಲ್ಲಿ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಧ್ರುವನಾರಾಯಣ ಸೂಚನೆ ನೀಡಿದ್ದಾರೆ. ನಿರ್ಲಕ್ಷ್ಯ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.

ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಡೆಂಗ್ಯೂ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಭಿತ್ತಿಪತ್ರ ಬಿಡುಗಡೆ ಮಾಡಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ನಗರ ಪೋಲಿಸ್ ಆಯುಕ್ತರಾದ ಸೀಮಾ ಲಾಟ್ಕರ್​ ಜಿಪಂ ಸಿಇಒ ಗಾಯಿತ್ರಿ, ಡಿಎಚ್ಓ ಡಾ ಕುಮಾರಸ್ವಾಮಿ ಸೇರಿ ಹಲವರು ಭಾಗಿ ಆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ