ಎರಡು ಬೈಕ್ಗೆ ಕಾರು ಡಿಕ್ಕಿ: ನಾಲ್ವರು ಸವಾರರು ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಬಳಿ ಸರಣಿ ಅಪಘಾತ ನಡೆದಿದ್ದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎರಡು ಬೈಕ್ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಬಳಿ ಸರಣಿ ಅಪಘಾತ ನಡೆದಿದ್ದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎರಡು ಬೈಕ್ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಹನುಮಂತ ಕಾಂಬಳೆ(38), ಯಮನವ್ವ ಬಿದರಿ(58), ಮಹದೇವ ಬಿದರಿ(32) ಮತ್ತು ಅಮೋಘಿ ಡವಳೇಶ್ವರ(26) ಮೃತಪಟ್ಟಿದ್ದಾರೆ.
ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಮೊದಲು ಒಂದು ಬೈಕ್ಗೆ ಡಿಕ್ಕಿಯಾಗಿದೆ. ನಂತರ 100 ಮೀ. ಅಂತರದಲ್ಲಿ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇನ್ನು, ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.
ಟಿಪ್ಪರ್ಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು ಇತ್ತ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣದಲ್ಲಿ ಟಿಪ್ಪರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ನಡೆದಿದೆ. ಕುಮಾರಪಟ್ಟಣದ ನಾಗರಾಜ ಕಲಕೋಟಿ(25) ಮೃತ ದುರ್ದೈವಿ.
ಇನ್ನು, ಅಪಘಾತದಲ್ಲಿ ಮತ್ತೊಬ್ಬರಿಗೆ ಗಾಯಗಳಾಗಿದ್ದು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್: ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರ ಆಕ್ರೋಶ