ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ವಾಸವಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ರಾಜನಗುಂಟೆ ಪೊಲೀಸ್​ ಠಾಣೆ
Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on: Oct 14, 2024 | 12:51 PM

ಬೆಂಗಳೂರು, ಅಕ್ಟೋಬರ್​ 14: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yalahanka) ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆಯತಪ್ಪಿ ನದಿಗೆ ಬಿದ್ದ ಬಾಲಕ

ಬೆಳಗಾವಿ: ಗೋಕಾಕ್ ಪಟ್ಟಣದ ಬಳಿ ಇರುವ ಮಾರ್ಕಂಡೇಶಯ ನದಿಗೆ ಬಾಲಕ ಆಯತಪ್ಪಿ ಬಿದ್ದಿದ್ದಾನೆ. ಸಾಗರ್ ಗೌಳಿ (16) ನದಿಯಲ್ಲಿ ಬಿದ್ದ ಬಾಲಕ. ಸಾಗರ್​ ಗೌಳಿಗಾಗಿ ಮಾರ್ಕಂಡೇಯ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾರ್ಟಿನ್ ಚಿತ್ರ ನೋಡಿ ವಾಪಸ್ ಬರುವಾಗ ಅಪಘಾತ, ವ್ಯಕ್ತಿ ಸಾವು

ಕಲಬುರಗಿ: ಮಾರ್ಟಿನ್ ಚಿತ್ರ ನೋಡಿ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ ಬಳಿ ಘಟನೆ ನಡೆದಿದೆ. ಮೌನೇಶ್ ಮೃತ ದುರ್ದೈವಿ. ಮೌನೇಶ್ ಮಾರ್ಟಿನ್ ಚಿತ್ರ ನೋಡಲು ಜೇವರ್ಗಿಯಿಂದ ಶಹಾಪುರಕ್ಕೆ ಬೈಕ್ ಮೇಲೆ ತೆರಳಿದ್ದನು. ವಾಪಾಸ್ ಬರುವಾಗ ಬೈಕ್​ಗೆ ಬಸ್ ಮತ್ತು ಟ್ರಕ್ ಗುದ್ದಿದೆ.

ಪರಿಣಾಮ ಮೌನೇಶ ಸ್ಥಳದಲ್ಲೇ ಮೃತಪಟದ್ದಾನೆ. ಲಕ್ಷ್ಮಿಕಾಂತ್​, ವಿಶ್ವನಾಥ್ ಎಂಬವುರಿಗೆ ಗಾಯವಾಗಿದೆ. ಮೂವರು ಜೇವರ್ಗಿ ಪಟ್ಟಣದ ಲಕ್ಷ್ಮಿ ಚೌಕ್​​ನ ನಿವಾಸಿಗಳು ಎಂದು ತಿಳಿದು ಬಂದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ