ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ವಾಸವಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ರಾಜನಗುಂಟೆ ಪೊಲೀಸ್​ ಠಾಣೆ
Edited By: ವಿವೇಕ ಬಿರಾದಾರ

Updated on: Oct 14, 2024 | 12:51 PM

ಬೆಂಗಳೂರು, ಅಕ್ಟೋಬರ್​ 14: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yalahanka) ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆಯತಪ್ಪಿ ನದಿಗೆ ಬಿದ್ದ ಬಾಲಕ

ಬೆಳಗಾವಿ: ಗೋಕಾಕ್ ಪಟ್ಟಣದ ಬಳಿ ಇರುವ ಮಾರ್ಕಂಡೇಶಯ ನದಿಗೆ ಬಾಲಕ ಆಯತಪ್ಪಿ ಬಿದ್ದಿದ್ದಾನೆ. ಸಾಗರ್ ಗೌಳಿ (16) ನದಿಯಲ್ಲಿ ಬಿದ್ದ ಬಾಲಕ. ಸಾಗರ್​ ಗೌಳಿಗಾಗಿ ಮಾರ್ಕಂಡೇಯ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾರ್ಟಿನ್ ಚಿತ್ರ ನೋಡಿ ವಾಪಸ್ ಬರುವಾಗ ಅಪಘಾತ, ವ್ಯಕ್ತಿ ಸಾವು

ಕಲಬುರಗಿ: ಮಾರ್ಟಿನ್ ಚಿತ್ರ ನೋಡಿ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ ಬಳಿ ಘಟನೆ ನಡೆದಿದೆ. ಮೌನೇಶ್ ಮೃತ ದುರ್ದೈವಿ.
ಮೌನೇಶ್ ಮಾರ್ಟಿನ್ ಚಿತ್ರ ನೋಡಲು ಜೇವರ್ಗಿಯಿಂದ ಶಹಾಪುರಕ್ಕೆ ಬೈಕ್ ಮೇಲೆ ತೆರಳಿದ್ದನು. ವಾಪಾಸ್ ಬರುವಾಗ ಬೈಕ್​ಗೆ ಬಸ್ ಮತ್ತು ಟ್ರಕ್ ಗುದ್ದಿದೆ.

ಪರಿಣಾಮ ಮೌನೇಶ ಸ್ಥಳದಲ್ಲೇ ಮೃತಪಟದ್ದಾನೆ. ಲಕ್ಷ್ಮಿಕಾಂತ್​, ವಿಶ್ವನಾಥ್ ಎಂಬವುರಿಗೆ ಗಾಯವಾಗಿದೆ. ಮೂವರು ಜೇವರ್ಗಿ ಪಟ್ಟಣದ ಲಕ್ಷ್ಮಿ ಚೌಕ್​​ನ ನಿವಾಸಿಗಳು ಎಂದು ತಿಳಿದು ಬಂದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us