ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2024 | 5:25 PM

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?