ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ಹೊಸಕೋಟೆಯಲ್ಲಿ ಪ್ರತ್ಯೇಕ ಅಪಘಾತ; ಒಂದು ಮಗು ಸೇರಿ ನಾಲ್ವರು ದುರ್ಮರಣ

ಬೆಳಗಾವಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದು ಮಗು ಸೇರಿದಂತೆ ಒಟ್ಟು ನಾಲ್ವರು ದುರ್ಮರಣ ಹೊಂದಿದ್ದಾರೆ. ಬೆಳಗಾವಿಯಲ್ಲಿ ದಂಪತಿ ಮೃತಪಟ್ಟರೆ, ಚಿಕ್ಕಬಳ್ಳಾಪುರದಲ್ಲಿ ಮಗು ಹಾಗೂ ಹೊಸಕೋಟೆ ಹೊರವಲಯದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ಹೊಸಕೋಟೆಯಲ್ಲಿ ಪ್ರತ್ಯೇಕ ಅಪಘಾತ; ಒಂದು ಮಗು ಸೇರಿ ನಾಲ್ವರು ದುರ್ಮರಣ
ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ಹೊಸಕೋಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ನಾಲ್ವರು ಸಾವು (ಸಾಂದರ್ಭಿಕ ಚಿತ್ರ)
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on: Oct 05, 2023 | 3:39 PM

ಚಿಕ್ಕೋಡಿ, ಅ.5: ಬೆಳಗಾವಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಅಪಘಾತ (Accident) ಪ್ರಕರಣಗಳಲ್ಲಿ ಒಂದು ಮಗು ಸೇರಿದಂತೆ ಒಟ್ಟು ನಾಲ್ವರು ದುರ್ಮರಣ ಹೊಂದಿದ್ದಾರೆ. ಬೆಳಗಾವಿಯಲ್ಲಿ ದಂಪತಿ ಮೃತಪಟ್ಟರೆ, ಚಿಕ್ಕಬಳ್ಳಾಪುರದಲ್ಲಿ ಮಗು ಹಾಗೂ ಹೊಸಕೋಟೆ ಹೊರವಲಯದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೆವಾಡಿ ಗ್ರಾಮದ ಬಳಿ ಟಾಟಾ ಏಸ್​ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಅನಿಲ್ ಪಾಟೀಲ್ (45) ಮತ್ತು ಅನಿತಾ ಪಾಟೀಲ್ (40) ಮೃತಪಟ್ಟಿದ್ದಾರೆ. ಇವರು ಮಹಾರಾಷ್ಟ್ರದ ಜತ್ತ ತಾಲೂಕಿನ ಶಿಗನಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಅಥಣಿಯಿಂದ ಶಿಗನಾಪುರಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತ ಇದಾಗಿದೆ.

ಅಪಘಾತವಾದ ಟಾಟಾ ಏಸ್​ ವಾಹನಕ್ಕೆ ಮತ್ತೊಂದು ಬೈಕ್ ಡಿಕ್ಕಿಯಾಗಿದ್ದು, ಇಬ್ಬರು ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಅಥಣಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಗು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ 4 ವರ್ಷದ ಮಗು ಸ್ಥಳದಲ್ಲೇ ದುರ್ಮರಣಹೊಂದಿದ ಘಟನೆ ತಾಲೂಕಿನ ಶ್ರೀನಿವಾಸ ಸಾಗರ ಕ್ರಾಸ್ ಬಳಿ ನಡೆದಿದೆ. ಕೆಪಿಸಿ ಗೋಣಿಚೀಲ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಮನೋಜ್, ಸಂತನ್ ದೇವಿ ಅವರ ಪುತ್ರಿ ಅಂಕುಶ್ (4) ಮೃತಪಟ್ಟ ಮಗು.

ಇದನ್ನೂ ಓದಿ: ಇಟಲಿಯಲ್ಲಿ ಅಪಘಾತಕ್ಕೀಡಾದ ನಟಿ ಗಾಯತ್ರಿ ಹಾಗೂ ಆಕೆಯ ಕೋಟ್ಯಧಿಪತಿ ಗಂಡ ವಿಕಾಸ್ ಯಾರು?

ಸ್ಥಳದಲ್ಲಿ ಮೃತ ಅಂಕುಶ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಂತರ ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ.

ಬೈಕ್​ಗಳ ನಡುವೆ ಡಿಕ್ಕಿ, ವ್ಯಕ್ತಿ ಸಾವು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ಎರಡು ಬೈಕ್​ಗಳ ನಡುವೆ ನಡೆದ ಅಪಘಾತದಲ್ಲಿ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ದರ್ಶನ್ ​(25) ಮೃತ ವ್ಯಕ್ತಿ. ಘಟನೆಯಲ್ಲಿ ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಲಾರದಿಂದ ಬೆಂಗಳೂರಿನತ್ತ ಚಲಿಸುತ್ತಿದ್ದ ಬೈಕ್​ಗಳ ನಡುವೆ ಡಿಕ್ಕಿ ಹೊಡೆದಿದ್ದು, ಈ ವೇಳೆ ದರ್ಶನ್ ಟಿಪ್ಪರ್ ಅಡಿಕೆ ಬಿದ್ದ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ