ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಕಾರಣ ಶಂಕೆ

ಕೂಲಿಗೆಂದು ಕರೆಯಲು ಬುಧವಾರ ಮುಂಜಾನೆ ಗ್ರಾಮದವರೊಬ್ಬರು ಮಹದೇವಪ್ಪ ಅವರ ಮನೆಯ ಬಾಗಿಲು ಬಡಿದಾಗ ಯಾರೂ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದ ಗ್ರಾಮಸ್ಥರು ಹೆಂಚು ಸರಿಸಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂತು.

ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಕಾರಣ ಶಂಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 02, 2021 | 6:34 PM

ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಎಚ್​.ಮೂಕಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮಹದೇವಪ್ಪ (46), ಅವರ ಪತ್ನಿ ಮಂಗಳಮ್ಮ (40), ಮಕ್ಕಳಾದ ಜ್ಯೋತಿ (14) ಮತ್ತು ಶ್ರುತಿ (12) ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಈ ಕುಟುಂಬದ ಎಲ್ಲರೂ ಕೊವಿಡ್​ನಿಂದ ಚೇತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

ಮಳೆ ಆಶ್ರಿತ ಭೂಮಿಯಲ್ಲಿ ಬೇಸಾಯ ಮಾಡುತ್ತಿದ್ದ ಮಹದೇವಪ್ಪ ಅವರಿವರ ಹೊಲಗಳಲ್ಲಿ ಕೂಲಿಗಳಿಗೂ ಹೋಗುತ್ತಿದ್ದರು. ಕೂಲಿಗೆಂದು ಕರೆಯಲು ಬುಧವಾರ ಮುಂಜಾನೆ ಗ್ರಾಮದವರೊಬ್ಬರು ಮಹದೇವಪ್ಪ ಅವರ ಮನೆಯ ಬಾಗಿಲು ಬಡಿದಾಗ ಯಾರೂ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದ ಗ್ರಾಮಸ್ಥರು ಹೆಂಚು ಸರಿಸಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂತು.

ಕುಟುಂಬದ ಸದಸ್ಯರೆಲ್ಲರೂ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಂತೆ ಮೇಲ್ನೋಟಕ್ಕೆ ಕಂಡು ಬರುತ್ತದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ನಿಜವಾದ ವಿಚಾರ ಬೆಳಕಿಗೆ ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ಅನಿತಾ ಹದ್ದಣ್ಣವರ್, ಡಿವೈಎಸ್​ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಮಹದೇವಪ್ಪ ಅವರು ಮಂಗಳವಾರ ಗ್ರಾಮಸ್ಥರೊಬ್ಬರ ಜೊತೆಗೆ ಚೆನ್ನಾಗಿಯೇ ಮಾತನಾಡಿದ್ದರು. ನಂಜನಗೂಡು ತಾಲ್ಲೂಕಿನ ಹಳ್ಳಿಯೊಂದರಲ್ಲಿರುವ ಹಿರಿಯ ಮಗಳ ಜೊತೆಗೂ ಚೆನ್ನಾಗಿ ಮಾತನಾಡಿದ್ದರು ಎಂದು ತಿಳಿದುಬಂದಿದೆ.

Chamarajanagar

ಚಾಮರಾಜನಗರ ತಾಲ್ಲೂಕಿನ ಎಚ್.ಮೂಕನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾ ಸೋಂಕಿನ ಭೀತಿಯಿಂದ ಗ್ರಾಮಸ್ಥರು ಈ ಕುಟುಂಬದ ಜೊತೆಗೆ ಸರಿಯಾಗಿ ಬೆರೆಯುತ್ತಿರಲಿಲ್ಲ. ಲಾಕ್​ಡೌನ್ ಕಾರಣದಿಂದ ಕೂಲಿ ಕೆಲಸಗಳೂ ಸಿಗುತ್ತಿರಲಿಲ್ಲ. ಒಂಟಿತನ ಮತ್ತು ಆರ್ಥಿಕ ಸಂಕಷ್ಟದಿಂದ ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹಲವಾರು ಜನರು ವಾಟ್ಸಾಪ್​ ಗುಂಪುಗಳಲ್ಲಿ ಮೃತರ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ. ಆದರೆ ಪೊಲೀಸರು ಅಥವಾ ಜಿಲ್ಲಾಡಳಿತ ಈ ಸಾವನ್ನು ಹಸಿವಿನಿಂದ ಮಾಡಿಕೊಂಡ ಆತ್ಮಹತ್ಯೆ ಎಂದು ಈವರೆಗೆ ಘೋಷಿಸಿಲ್ಲ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(Four people of a same family suicide in H Mookanahalli Village Covid lockdown distress may be the reason)

ಇದನ್ನೂ ಓದಿ: My covid experience: ಕೊವಿಡ್ ಸೋಂಕಿತನೆಂಬ ಹಣೆಪಟ್ಟಿಗೆ ಹೆದರುವ ಜನ; ಹೀಗಳೆಯುವ ಸಮಾಜ, ಆಪ್ತರೂ ಬಲು ದೂರ

ಇದನ್ನೂ ಓದಿ: ಕೊರೊನಾ ಸಂಕಷ್ಟ: ತಂದೆ ಅಂತ್ಯಸಂಸ್ಕಾರದ ವೇಳೆ ಮಗನೂ ಸಾವು; ಮತ್ತೊಂದೆಡೆ ತಂದೆ-ತಾಯಿ ಕಳೆದುಕೊಂಡ 8 ಮಕ್ಕಳು

Published On - 6:30 pm, Wed, 2 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್