ಸಿಎಂ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ರಾಘವೇಂದ್ರ ಎಂಬಾತನನ್ನು ಬಂಧಿಸಲಾಗಿದೆ. ಕೆಎಎಸ್ ಅಧಿಕಾರಿಯ ನೇಮಕಾತಿಗಾಗಿ ನಕಲಿ ಟಿಪ್ಪಣಿ ಸೃಷ್ಟಿಸಿ ವಂಚಿಸಿದ ಆರೋಪವಿದೆ. ಆರೋಪಿ ಹಲವು ಶಾಸಕರ ಪಿಎ ಆಗಿ ಕೆಲಸ ಮಾಡಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿಗಳ ಕಚೇರಿಯ (CM Office) ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೀಪಿ. ಕೆಎಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ರಾಘವೇಂದ್ರ ಈ ಹಿಂದೆ ಹಲವು ಶಾಸಕರ ಬಳಿ ಪಿಎ ಆಗಿ ಕೆಲಸ ಮಾಡಿದ್ದನು ಎಂದು ತಿಳಿದುಬಂದಿದೆ. ಆರೋಪಿ ರಾಘ್ರವೇಂದ್ರ ವಿರುದ್ಧ ಪೋಸ್ಟಿಂಗ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಆರೋಪವೂ ಕೇಳಿಬಂದಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನ ವಿಚಾರಣೆ ನಡೆಸುತ್ತಿದ್ದಾರೆ.