ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ; ವಿಧಾನಸೌಧ ಠಾಣೆಯಲ್ಲಿ 2 ಪ್ರಕರಣ ದಾಖಲು

ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ನಕಲಿ ಆದೇಶ ಹೊರಿಡಿಸಲಾಗಿದೆ. ಅಲ್ಲದೆ ಮತ್ತೊಂದೆಡೆ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಲ್ಪಸಂಖ್ಯಾತರ ಕಾಲೋನಿ ಮೂಲ ಸೌಕರ್ಯಗಳ ಅಭಿವೃದ್ಧಿ ಹೆಸರಿನಲ್ಲಿ ನಾಲ್ಕು ಕೋಟಿ ಕಾಂಟ್ರಾಕ್ಟ್ ನೀಡಿದ್ದಾಗಿ ನಕಲಿ ದಾಖಲೆ ತಯಾರಿಸಿ ವಂಚನೆಗೆ ಯತ್ನಿಸಲಾಗಿದೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ; ವಿಧಾನಸೌಧ ಠಾಣೆಯಲ್ಲಿ 2 ಪ್ರಕರಣ ದಾಖಲು
ವಿಧಾನಸೌಧ ಪೊಲೀಸ್ ಠಾಣೆ
Follow us
| Updated By: ಆಯೇಷಾ ಬಾನು

Updated on: Mar 31, 2024 | 8:04 AM

ಬೆಂಗಳೂರು, ಮಾರ್ಚ್​.31: ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶಗಳ (Fake Order) ಹಾವಳಿ ಹೆಚ್ಚಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಪತ್ರಗಳು ಹರಿದಾಡುತ್ತಿದ್ದು ಇದರಿಂದ ಭಾರೀ ಸಮಸ್ಯೆಯಾಗಿದೆ. ಸದ್ಯ ವಿಧಾನ ಸೌಧ ಠಾಣೆಯಲ್ಲಿ (Vidhana Soudha Police Station) ಎರಡು ಪ್ರತ್ಯೇಕ ಕೇಸ್​ಗಳು ದಾಖಲಾಗಿವೆ. ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ‌ಹಿರಿಯ‌ ಅಧಿಕಾರಿಗಳಿಂದ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿವೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್​ಹೆಚ್​ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್​ಹೆಚ್​ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ಆದೇಶದ ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿವೆ. ಆರೋಪಿಗಳು ಆದೇಶದ ಪ್ರತಿಯನ್ನು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದು ಈ ಆದೇಶ ಕುರಿತು ನೈಜತೆ ಪರಿಶೀಲನೆ ವೇಳೆ ನಕಲಿ ಆದೇಶ ಪತ್ರ ಎಂಬುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುಖ್ಯಮಂತ್ರಿ‌ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಅವರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು

ಒಂದು ಕಡೆ ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲೇ ನೇಮಕಾತಿ ಬಗ್ಗೆ ನಕಲಿ ಆದೇಶ ಹೊರಡಿಸಿದ್ರೆ ಮತ್ತೊಂದೆಡೆ ವಕ್ಫ್ ಬೋರ್ಡ್ ಕಾರ್ಯದರ್ಶಿ ಹೆಸರಿನಲ್ಲಿ ಕಾಂಟ್ರಾಕ್ಟ್ ಪಡೆದ ಆದೇಶ ಪ್ರತಿ ಹೊರಡಿಸಿ ಹಣ ಮಾಡಲು ಹೊರಟಿರುವುದು ಪತ್ತೆಯಾಗಿದೆ.

ಇದೇ ರೀತಿ ನಕಲಿ ಸರ್ಕಾರಿ ಆದೇಶ ಸೃಷ್ಟಿ ಮಾಡಿ ಕಾಂಟ್ರಾಕ್ಟ್ ಪಡೆಯಲು ಆರೋಪಿಗಳು ಯತ್ನಿಸಿದ್ದಾರೆ. ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಕಾಲೋನಿ ಮೂಲ ಸೌಕರ್ಯಗಳ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದೆ. ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದ್ದು ನಕಲಿ ಆದೇಶದಲ್ಲಿ ನಾಲ್ಕು ಕೋಟಿ ಕಾಂಟ್ರಾಕ್ಟ್ ನೀಡಿರುವ ಬಗ್ಗೆ ಉಲ್ಲೇಖಿಸಲಾಗಿಎದ.

ಸದ್ಯ ನಕಲಿ‌ ಆದೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ‌ ಕಛೇರಿಗೆ ಸಲ್ಲಿಸಿದ್ದ ನಕಲಿ ಕಾಂಟ್ರಾಕ್ಟರ್ ನಿಖಿಲ್ ವಿರುದ್ಧ ಸರ್ಕಾರಿ ‌ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರು ದೂರು ನೀಡಿದ್ದಾರೆ. ಸದ್ಯ ಈ ಎರಡು ಪ್ರಕರಣಗಳನ್ನು ವಿಧಾನಸೌದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್