ಬೆಂಗಳೂರು, ಮಾರ್ಚ್.31: ಸರ್ಕಾರದ ಹೆಸರಿನಲ್ಲಿ ನಕಲಿ ಆದೇಶಗಳ (Fake Order) ಹಾವಳಿ ಹೆಚ್ಚಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಪತ್ರಗಳು ಹರಿದಾಡುತ್ತಿದ್ದು ಇದರಿಂದ ಭಾರೀ ಸಮಸ್ಯೆಯಾಗಿದೆ. ಸದ್ಯ ವಿಧಾನ ಸೌಧ ಠಾಣೆಯಲ್ಲಿ (Vidhana Soudha Police Station) ಎರಡು ಪ್ರತ್ಯೇಕ ಕೇಸ್ಗಳು ದಾಖಲಾಗಿವೆ. ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ಹಿರಿಯ ಅಧಿಕಾರಿಗಳಿಂದ ದೂರು ದಾಖಲಾಗಿದೆ.
ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿವೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್ಹೆಚ್ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್ಹೆಚ್ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ಆದೇಶದ ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿವೆ. ಆರೋಪಿಗಳು ಆದೇಶದ ಪ್ರತಿಯನ್ನು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದು ಈ ಆದೇಶ ಕುರಿತು ನೈಜತೆ ಪರಿಶೀಲನೆ ವೇಳೆ ನಕಲಿ ಆದೇಶ ಪತ್ರ ಎಂಬುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುಖ್ಯಮಂತ್ರಿ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಅವರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು
ಒಂದು ಕಡೆ ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ ಹೆಸರಿನಲ್ಲೇ ನೇಮಕಾತಿ ಬಗ್ಗೆ ನಕಲಿ ಆದೇಶ ಹೊರಡಿಸಿದ್ರೆ ಮತ್ತೊಂದೆಡೆ ವಕ್ಫ್ ಬೋರ್ಡ್ ಕಾರ್ಯದರ್ಶಿ ಹೆಸರಿನಲ್ಲಿ ಕಾಂಟ್ರಾಕ್ಟ್ ಪಡೆದ ಆದೇಶ ಪ್ರತಿ ಹೊರಡಿಸಿ ಹಣ ಮಾಡಲು ಹೊರಟಿರುವುದು ಪತ್ತೆಯಾಗಿದೆ.
ಇದೇ ರೀತಿ ನಕಲಿ ಸರ್ಕಾರಿ ಆದೇಶ ಸೃಷ್ಟಿ ಮಾಡಿ ಕಾಂಟ್ರಾಕ್ಟ್ ಪಡೆಯಲು ಆರೋಪಿಗಳು ಯತ್ನಿಸಿದ್ದಾರೆ. ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಕಾಲೋನಿ ಮೂಲ ಸೌಕರ್ಯಗಳ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದೆ. ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದ್ದು ನಕಲಿ ಆದೇಶದಲ್ಲಿ ನಾಲ್ಕು ಕೋಟಿ ಕಾಂಟ್ರಾಕ್ಟ್ ನೀಡಿರುವ ಬಗ್ಗೆ ಉಲ್ಲೇಖಿಸಲಾಗಿಎದ.
ಸದ್ಯ ನಕಲಿ ಆದೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಿದ್ದ ನಕಲಿ ಕಾಂಟ್ರಾಕ್ಟರ್ ನಿಖಿಲ್ ವಿರುದ್ಧ ಸರ್ಕಾರಿ ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರು ದೂರು ನೀಡಿದ್ದಾರೆ. ಸದ್ಯ ಈ ಎರಡು ಪ್ರಕರಣಗಳನ್ನು ವಿಧಾನಸೌದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ