ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣ
ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ […]

ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.
ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಬಿ.ಎಸ್.ಯಡಿಯೂರಪ್ಪ ಮನವಿಮಾಡಿಕೊಂಡಿದ್ದಾರೆ.
ಅಲ್ಲದೆ ನಿನ್ನೆ ಸರ್ಕಾರ ವಲಸೆ ಕಾರ್ಮಿಕರನ್ನು ತಮ್ಮ ಗ್ರಾಮಗಳಿಗೆ ಕಳುಹಿಸುವ ನಿರ್ಧಾರ ಮಾಡಿದ ಮೇಲೆ ಕೆ.ಎಸ್.ಆರ್.ಟಿ.ಸಿ ದುಪ್ಪಟ್ಟು ಪ್ರಯಾಣ ದರ ವಸೂಲಿಗೆ ನಿಂತಿತ್ತು. ಕೊರೊನಾದಿಂದ ಕಂಗಾಲಾದವರ ಬಳಿ ಹಣ ವಸೂಲಿ ಮಾಡುವುದು ಎಷ್ಟು ಸರಿ ಎಂಬ ಅಪಾರ ವಿರೋಧ ಕೇಳಿಬಂದಿತ್ತು. ಈಗ ಈ ರೀತಿ ಹಣ ಪಡೆಯದೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.




