ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣ

ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ […]

ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ  3 ದಿನ ಉಚಿತ ಪ್ರಯಾಣ
ಸಾಧು ಶ್ರೀನಾಥ್​

Updated on: May 03, 2020 | 11:45 AM

ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.

ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಬಿ.ಎಸ್.ಯಡಿಯೂರಪ್ಪ ಮನವಿಮಾಡಿಕೊಂಡಿದ್ದಾರೆ.

ಅಲ್ಲದೆ ನಿನ್ನೆ ಸರ್ಕಾರ ವಲಸೆ ಕಾರ್ಮಿಕರನ್ನು ತಮ್ಮ ಗ್ರಾಮಗಳಿಗೆ ಕಳುಹಿಸುವ ನಿರ್ಧಾರ ಮಾಡಿದ ಮೇಲೆ ಕೆ.ಎಸ್.ಆರ್.ಟಿ.ಸಿ ದುಪ್ಪಟ್ಟು ಪ್ರಯಾಣ ದರ ವಸೂಲಿಗೆ ನಿಂತಿತ್ತು. ಕೊರೊನಾದಿಂದ ಕಂಗಾಲಾದವರ ಬಳಿ ಹಣ ವಸೂಲಿ ಮಾಡುವುದು ಎಷ್ಟು ಸರಿ ಎಂಬ ಅಪಾರ ವಿರೋಧ ಕೇಳಿಬಂದಿತ್ತು. ಈಗ ಈ ರೀತಿ ಹಣ ಪಡೆಯದೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us