25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್​ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ

ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸು ಕಂಡಿರುವ ಬಡ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಹಿ ಸುದ್ದಿ ನೀಡಿದೆ. ಈ ವರ್ಷದಿಂದಲೇ 25 ಸಾವಿರ ಬಡ ವಿದ್ಯಾರ್ಥಿಗಳಿಗೆ ನೀಟ್​ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್​ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Aug 23, 2024 | 1:35 PM

ಬೆಂಗಳೂರು, ಆಗಸ್ಟ್​ 23: ಪಿಯುಸಿ (PUC) ಹಂತದಲ್ಲಿ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ. ಇದರಿಂದ ಬಡ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕ್ಲಾಸ್​ಗೆ ಹೋಗಿ, ಲಕ್ಷ ಲಕ್ಷ ಹಣ ಖರ್ಚು ಮಾಡುವುದು ತಪ್ಪುತ್ತದೆ. ಇದು ವೈದ್ಯಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ ಎಂದರು.

25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆ ಪರೀಕ್ಷೆ ನಡೆಯಲಿದೆ. ಇಲ್ಲಿ ಪಾಸ್​ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:   ಕರ್ನಾಟಕ ವಿಧಾನಸಭೆ ಕಲಾಪ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ‌ ಉಳಿಸಬೇಕಾಗಿದೆ.ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ.ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್​ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಆದರ್ಶ ಶಾಲೆಗಳಲ್ಲಿ ಪಿಯು ಕಾಲೇಜ್ ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ಕಾಲೇಜು ಕೊರತೆ ನೀಗಿಸಲು ತೀರ್ಮಾನ ಮಾಡಿದ್ದೇವೆ. ತಿಂಗಳದ ಮೂರನೇ ಶನಿವಾರ ಬ್ಯಾಗ್ ಲೆಸ್ ಡೇ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು, ಬ್ಯಾಗ್ ಲೆಸ್ ಮಾಡದೆ ಇದ್ದರೆ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ. ಬ್ಯಾಗ್ ಹೊರೆ ಕಡಿಮೆ ಮಾಡಲು ಪಾರ್ಟ್ – 1 ಪಾರ್ಟ್ – 2 ಅಂತ ಪಠ್ಯಕ್ರಮ ವಿಭಾಗ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us