ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್ಡೌನ್ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ಡೌನ್ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ಸಿಎಂ ಬಿಎಸ್ವೈ ತಿಳಿಸಿದ್ದಾರೆ.
2/2
ಈ ಹಿನ್ನೆಲೆಯಲ್ಲಿ ದಿನಾಂಕ: 31-05-2020 ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.#KarnatakaFightsCorona #IndiaFightsCoronavirus
— CM of Karnataka (@CMofKarnataka) May 22, 2020
Published On - 3:45 pm, Fri, 22 May 20