ಆಕಸ್ಮಿಕ ಬೆಂಕಿಗೆ ಫ್ರಿಡ್ಜ್ ಸ್ಫೋಟ: ಮೂವರಿಗೆ ಗಂಭೀರ ಗಾಯ

| Updated By: ಸಾಧು ಶ್ರೀನಾಥ್​

Updated on: Feb 03, 2021 | 12:27 PM

ಆಟೋ ಚಾಲಕ ಚಂದ್ರು ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಈ ಅವಗಡದಲ್ಲಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.

ಆಕಸ್ಮಿಕ ಬೆಂಕಿಗೆ ಫ್ರಿಡ್ಜ್ ಸ್ಫೋಟ: ಮೂವರಿಗೆ ಗಂಭೀರ ಗಾಯ
ಫ್ರಿಡ್ಜ್ ಸ್ಫೋಟಗೊಂಡಿರುವ ದೃಶ್ಯ
Follow us on

ಮೈಸೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ ಫ್ರಿಡ್ಜ್ ಸ್ಫೋಟಗೊಂಡ ಘಟನೆ ಮೈಸೂರಿನ ಲಾಲ್ ಬಂದ್ ಬೀದಿಯಲ್ಲಿ ನಡೆದಿದೆ. ಆಟೋ ಚಾಲಕ ಚಂದ್ರು ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.

ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ

ಸಟ್ಟು ಕರಕಲಾಗಿರುವ ಮನೆಯ ವಸ್ತುಗಳು

ಈ ಬೆಂಕಿ ಅವಘಡದಲ್ಲಿ ಅನಾಹುತ ತಪ್ಪಿಸಲು ತೆರಳಿದ ನೆರೆ ಮನೆ ನಿವಾಸಿ ಮೊಹಮ್ಮದ್ ಉರ್ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಸೂಕ್ತ ಸಮಯಕ್ಕೆ ಬಂದು ಭಾರಿ ಅನಾಹುತ ತಪ್ಪಿಸಿದ್ದಾರೆ.

ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಮೆಕ್ಕೆಜೋಳ ನಾಶ