AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session: ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ

ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Karnataka Assembly Session: ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ
ವಿಧಾನಸೌದ
ವಿವೇಕ ಬಿರಾದಾರ
|

Updated on:May 22, 2023 | 6:55 AM

Share

ಬೆಂಗಳೂರು: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ (Karnataka Assembly Session) ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಆರ್​.ವಿ ದೇಶಪಾಂಡೆಯವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರ ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.

ಸದಸ್ಯರ ಪ್ರಮಾಣವಚನ ಸ್ವೀಕಾರದ ಜೊತೆಗೆ ಸ್ಪೀಕರ್​ ಆಯ್ಕೆ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಸ್ಪೀಕರ ಸ್ಥಾನಕ್ಕೆ ಹಿರಿಯ ನಾಯಕರಾದ ಆರ್​.ವಿ ದೇಶಪಾಂಡೆ, ಹೆಚ್​.ಕೆ ಪಾಟೀಲ್​​ ಹಾಗೂ ಟಿ.ಬಿ ಜಯಚಂದ್ರ ಹೆಸರು ಕೇಳಿ ಬಂದಿದೆ.

ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ

ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಧಿವೇಶನದ ಕಾರ್ಯ- ಕಲಾಪಗಳಿಗೆ ಅಡಚಣೆಯಾಗಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6ರಿಂದ ಬುಧವಾರ ಮಧ್ಯರಾತ್ರಿ 12ರ ವರೆಗೆ ವಿಧಾನಸೌಧದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಈ ಆದೇಶದ ಅನ್ವಯ ಈ ನಿಷೇಧ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು ಮೊದಲಾದ ಮಾರಕಾಸ್ತ್ರ ಒಯ್ಯುವಂ ತಿಲ್ಲ, ಯಾವುದೋ ಸ್ಫೋಟಕ ವಸ್ತು ಗಳನ್ನು ಸಿಡಿಸುವುದು, ಉಪಕರಣ ಸಾಗಾಟ, ಶೇಖರಣೆ ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದ ರ್ಶನ, ಬಹಿರಂಗ ಘೋಷಣೆ ಕೂಗು ವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Mon, 22 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ