ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವುದು ಸಿಕ್ಕಿದ್ದು, ಜಾತಿ ನಿಂದನೆ ಮಾಡಿರುವ ಧ್ವನಿ ಮುನಿರತ್ನ ಅವರದ್ದು ಎನ್ನುವುದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ
ಬಿಜೆಪಿ ಶಾಸಕ ಮುನಿರತ್ನ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on: Nov 25, 2024 | 9:59 PM

ಬೆಂಗಳೂರು, (ನವೆಂಬರ್ 25):  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಬಳಿಕ ಸೆ.14ರಂದು ಎಸ್​ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್​ಎಸ್ಎಲ್​ಗೆ ಕಳುಹಿಸಿದರು. ಈಗ ಎಫ್ಎಸ್​ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ ಕೈಸೇರಿದ್ದು, ಮುನಿರತ್ನ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಆಡಿಯೋ ಧ್ವನಿ ಧೃಡವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಮುನಿರತ್ಮಗೆ ಮತ್ತೆಗೆ ಸಂಕಷ್ಟು ಎದುರಾಗುವುದು ಕಟ್ಟಿಟ್ಟ ಬುತ್ತಿ.

ಈ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಆಚೆ ಬಂದಿದ್ದರು. ಬಳಿಕ ಅತ್ಯಾಚಾರ ಪ್ರಕರಣದಲ್ಲೂ ಸಹ ಮತ್ತೆ ಜೈಲು ಸೇರಿದ್ದರು. ಬಳಿಕ ಆ ಪ್ರಕರಣದಲ್ಲೂ ಸಹ ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಮತ್ತೆ ಜಾತಿ ನಿಂದನೆ ಪ್ರಕರಣ ಮುನಿರತ್ನ ಅವರಿಗೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ