AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ತಿಂಡಿ, ಬೇಕರಿ ಘಟಕಗಳ ಮೇಲೆ ದಾಳಿ: ಕೋವಾ ಸೇರಿ 5.99 ಲಕ್ಷ ಮೌಲ್ಯದ ಆಹಾರ ಪದಾರ್ಥ ವಶಕ್ಕೆ

Karnataka FSSAI Raids: ಆಹಾರ ಸುರಕ್ಷತಾ ಇಲಾಖೆ ರಾಜ್ಯಾದ್ಯಂತ ಸಿಹಿ ತಿಂಡಿ, ಬೇಕರಿ ಘಟಕಗಳ ಮೇಲೆ ದಾಳಿ ನಡೆಸಿ FSSAI ನಿಯಮ ಉಲ್ಲಂಘನೆ, ಸ್ವಚ್ಛತೆ ಕೊರತೆ ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಪತ್ತೆ ಹಚ್ಚಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ 5.99 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಹಿ ತಿಂಡಿ, ಬೇಕರಿ ಘಟಕಗಳ ಮೇಲೆ ದಾಳಿ: ಕೋವಾ ಸೇರಿ 5.99 ಲಕ್ಷ ಮೌಲ್ಯದ ಆಹಾರ ಪದಾರ್ಥ ವಶಕ್ಕೆ
ಆಹಾರ ಇಲಾಖೆ ದಾಳಿImage Credit source: tv9 kannada
ವಿನಯ್​ ಕಾಶಪ್ಪನವರ್​
| Edited By: |

Updated on: Aug 31, 2026 | 7:14 PM

Share

ಬೆಂಗಳೂರು, ಆಗಸ್ಟ್​ 31: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಹಿ ತಿಂಡಿ (Sweet food), ಬೇಕರಿ ಹಾಗೂ ವಿವಿಧ ಆಹಾರ ಉತ್ಪನ್ನಗಳ ತಯಾರಿಕಾ ಘಟಕಗಳ ಮೇಲೆ ಇಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ಎಫ್‌ಡಿಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಆ ಮೂಲಕ ಶಾಕ್​ ನೀಡಲಾಗಿದೆ. ಇನ್ನು ಈ ವಿಶೇಷ ಕಾರ್ಯಾಚರಣೆ ವೇಳೆ ಸುಮಾರು 5 ಲಕ್ಷ 99 ಸಾವಿರ ರೂ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.

ಕಳಪೆ, ನಕಲಿ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆ

5 ಲೀಟರ್ ಎಕ್ಸ್‌ಪೈರಿ ಆಗಿದ್ದ ನಂದಿನಿ ಮೊಸರು, 6 ಕೆಜಿ ಕಳಪೆ ಕೋವಾ, 10 ಕೆಜಿ ಚಾಕೊಲೇಟ್ ಫ್ಲೇವರ್ ಹಾಗೂ 5 ಕೆಜಿ ರಸಗುಲ್ಲಾ. ತಪ್ಪು ಲೇಬಲಿಂಗ್ ಹೊಂದಿದ್ದ ಚಾಕೊಲೇಟ್‌ಗಳು, ಕೇಕ್ ಅಲಂಕಾರ ಪದಾರ್ಥಗಳು ಹಾಗೂ ತಪ್ಪು ಬ್ರಾಂಡಿಂಗ್ ಮಾಡಲಾಗಿದ್ದ 60 ಕೆಜಿ ಬಾಳೆಕಾಯಿ ಚಿಪ್ಸ್ ಮತ್ತು ಚಕ್ಕುಲಿ ಮಸಾಲಾ. 360 ಕೆಜಿ ರೆಡಿ-ಟು-ಈಟ್ ಸೆವೇರಿಯಸ್, 196 ಕೆಜಿ ಸೋನ್‌ಪಾಪಡಿ, 4 ಕೆಜಿ ಕೋಕೋ ಪೌಡರ್ ಮತ್ತು 4.5 ಕೆಜಿ ಕ್ರಾಕ್ಡ್ ಕೋಕೋ ಪೀಸ್‌ಗಳು ಪತ್ತೆ ಆಗಿವೆ.

ಮರೀಚಿಕೆಯಾದ ಸ್ವಚ್ಛತೆ; ನಿಯಮಗಳಿಗೆ ಕ್ಯಾರೆ ಎನ್ನದ ಮಾಲೀಕರು

ಒಟ್ಟು 16 ಆಹಾರ ತಯಾರಿಕಾ ಘಟಕಗಳಿಗೆ ದಿಢೀರ್ ಭೇಟಿ ಮಾಡಿದ ಅಧಿಕಾರಿಗಳಿಗೆ ಹಲವೆಡೆ ಕನಿಷ್ಠ ಸ್ವಚ್ಛತೆಯೂ ಇಲ್ಲದೆ ಅತ್ಯಂತ ಕಳಪೆ ವಾತಾವರಣದಲ್ಲಿ ತಿಂಡಿ-ತಿನಿಸುಗಳನ್ನು ತಯಾರಿಸುತ್ತಿರುವುದು ಕಂಡುಬಂದಿದೆ. FSSAI ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ್ದ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಲಾಖೆ ಸಜ್ಜಾಗಿದೆ. ಒಟ್ಟು 16 ವಿವಿಧ ಆಹಾರ ಮಾದರಿಗಳನ್ನು ಸಂಗ್ರಹಿಸಿ ನಿಖರ ಗುಣಮಟ್ಟ ಹಾಗೂ ಕಲಬೆರಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು: ಹಬ್ಬಕ್ಕೂ 14 ದಿನ ಮುಂಚಿತವಾಗಿಯೇ ತಪಾಸಣೆ ಶುರು

ಎಣ್ಣೆ, ಮರುಬಳಕೆಯ ತಾಜಾ ಎಣ್ಣೆ, ಬೆಲ್ಲ, ಕಡಲೆ, ಜಿಲೇಬಿ, ಕೋವಾ ಮತ್ತು ಟೀ ಪೌಡರ್ ಸೇರಿದಂತೆ ಹಲವು ಪದಾರ್ಥಗಳ ಸ್ಯಾಂಪಲ್‌ಗಳನ್ನು ತಜ್ಞರ ಪರೀಕ್ಷೆಗೆ ಕಳುಹಿಸಲಾಗಿದೆ. ಲ್ಯಾಬ್ ವರದಿ ಬಂದ ಬಳಿಕ ಕಲಬೆರಕೆ ಸಾಬೀತಾದರೆ ಸಂಬಂಧಪಟ್ಟ ಘಟಕಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಹೋರಾಟ ನಡೆಸುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ