AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಮೂಲವಲ್ಲದ ಉತ್ಪನ್ನಕ್ಕೆ ಪನೀರ್ ಹೆಸರು ಬಳಕೆ ಮಾಡುವಂತಿಲ್ಲ: ನಕಲಿ ದಂಧೆ ಕಡಿವಾಣಕ್ಕೆ ಮುಂದಾದ FSSAI

ಈಗಾಗಲೇ ರಾಜ್ಯದಲ್ಲಿ ಕೃತಕ ‘ಅನಲಾಗ್ ಪನ್ನೀರ್’ ಅನ್ನು 1 ವರ್ಷ ಬ್ಯಾನ್​ ಮಾಡಲಾಗಿದೆ. ಇದೀಗ ಪನೀರ್ ಹೆಸರಿನಲ್ಲಿ ನಕಲಿ ಮಾರಾಟಕ್ಕೆ ಬ್ರೇಕ್ ಹಾಕಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂದಾಗಿದೆ. ಹಾಲಿನ ಮೂಲವಲ್ಲದ ಪದಾರ್ಥಗಳಿಂದ ತಯಾರಿಸಿದ ಉತ್ಪನ್ನಕ್ಕೆ ಪನೀರ್ ಹೆಸರು ಬಳಕೆ ಮಾಡುವಂತಿಲ್ಲ ಎಂದು FSSAI ಹೊಸ ನಿಯಮ ಪ್ರಕಟಿಸಿದೆ.

ಹಾಲಿನ ಮೂಲವಲ್ಲದ ಉತ್ಪನ್ನಕ್ಕೆ ಪನೀರ್ ಹೆಸರು ಬಳಕೆ ಮಾಡುವಂತಿಲ್ಲ: ನಕಲಿ ದಂಧೆ ಕಡಿವಾಣಕ್ಕೆ ಮುಂದಾದ FSSAI
ಪನೀರ್‌Image Credit source: Getty images
ವಿನಯ್​ ಕಾಶಪ್ಪನವರ್​
| Edited By: |

Updated on: Sep 24, 2026 | 10:03 PM

Share

ಬೆಂಗಳೂರು, ಸೆಪ್ಟೆಂಬರ್​​ 24: ಪನೀರ್ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ನಕಲಿ ಹಾಗೂ ಗುಣಮಟ್ಟವಿಲ್ಲದ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್​​​​ಎಸ್​ಎಸ್​​ಎಐ) ಮಹತ್ವದ ಹೆಜ್ಜೆ ಇಟ್ಟಿದೆ. ಹಾಲಿನಿಂದ ಪಡೆಯದ ಅಥವಾ ಹಾಲಿನ ಮೂಲವಲ್ಲದ ಪದಾರ್ಥಗಳಿಂದ ತಯಾರಿಸಲಾಗುವ ಯಾವುದೇ ಉತ್ಪನ್ನಗಳಿಗೆ ‘ಪನೀರ್’ ಎಂಬ ಹೆಸರು ಬಳಕೆ ಮಾಡುವಂತಿಲ್ಲ ಎಂದು ಎಫ್‌ಎಸ್‌ಎಸ್‌ಎಐ ಹೊಸ ನಿಯಮವನ್ನು ಪ್ರಕಟಿಸಿದೆ.

ಅನಲಾಗ್ ಪನೀರ್ ಉತ್ಪಾದನೆ ಮತ್ತು ಮಾರಾಟಕ್ಕೆ ಕಠಿಣ ನಿಯಮ

ಹಾಲಿನ ಹೊರತಾಗಿ ಇತರ ಅಂಶಗಳಿಂದ ತಯಾರಾಗುವ ‘ಅನಲಾಗ್ ಪನೀರ್’ ಉತ್ಪಾದನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈ ಹೊಸ ನಿಯಮವನ್ನು ತರಲಾಗುತ್ತಿದೆ. ಇಂತಹ ಅನಲಾಗ್ ಡೈರಿ ಉತ್ಪನ್ನಗಳ ಲೇಬಲ್ ಹಾಗೂ ಮಾರ್ಕೆಟಿಂಗ್‌ನಲ್ಲೂ ಯಾವುದೇ ಕಾರಣಕ್ಕೂ ‘ಪನೀರ್’ ಎಂಬ ಪದವನ್ನು ಬಳಸುವಂತಿಲ್ಲ ಎಂದು ಪ್ರಸ್ತಾವನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೃತಕ ಪನ್ನೀರ್ ಬ್ಯಾನ್ ಯಾಕೆ? ಏನಿದು ಅನಲಾಗ್ ಪನ್ನೀರ್? ಯಾವುದರಿಂದ ತಯಾರು ಮಾಡ್ತಾರೆ?

ಪನೀರ್ ಹೆಸರಿನಲ್ಲಿ ಗ್ರಾಹಕರಿಗೆ ತಪ್ಪು ಮಾಹಿತಿ ನೀಡುತ್ತಿರುವುದಕ್ಕೆ ಮತ್ತು ಉತ್ಪನ್ನದ ಸ್ವರೂಪದ ಕುರಿತು ಜನರಲ್ಲಿ ಮೂಡುವ ಗೊಂದಲವನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

LIVE TV

ಸಾರ್ವಜನಿಕರ ಸಲಹೆಗೆ 60 ದಿನಗಳ ಕಾಲಾವಕಾಶ

ಇನ್ನು ಅನಲಾಗ್ ಪನೀರ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸದ್ಯ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕರಡು ನಿಯಮಗಳನ್ನು ಮಾತ್ರ ಪ್ರಕಟಿಸಿದ್ದು, ಇದು ಕೇವಲ ಪ್ರಸ್ತಾವಿತ ತಿದ್ದುಪಡಿಯಾಗಿದೆ.

ಇದನ್ನೂ ಓದಿ: ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಈ ಕುರಿತು ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಬರುವ ಸಲಹೆ ಮತ್ತು ಆಕ್ಷೇಪಣೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕವಷ್ಟೇ ಅಂತಿಮ ನಿಯಮವನ್ನು ಜಾರಿಗೆ ತರಲು ತೀರ್ಮಾನಿಸಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ