AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ

ಡೀಸೆಲ್ ದರ ಸತತ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸರಕು ಸಾಗಣೆ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಡೀಸೆಲ್ ದರ ಏರಿಕೆಗೆ ಅನುಗುಣವಾಗಿ ಸರಕು ಸಾಗಣೆ ದರ ಹೆಚ್ಚಳದ ಬಗ್ಗೆ ಬುಧವಾರ (ಮೇ 27) ಸಾರಿಗೆ ಸಂಸ್ಥೆಗಳ ಸಭೆ ಕರೆಯಲಾಗಿದ್ದು, ಗ್ರಾಹಕರಿಗೆ ಮತ್ತೊಂದು ದರ ಏರಿಕೆ ಬರೆಯ ನಿರೀಕ್ಷೆ ಇದೆ.

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: deccanherald
ಪ್ರಸನ್ನ ಹೆಗಡೆ
|

Updated on:May 26, 2026 | 4:29 PM

Share

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ

ಒಂದೊಮ್ಮೆ ಸರಕು ಸಾಗಣೆ ವಾಹನಗಳ ಬಾಡಿಗೆ ದರ ಏರಿಕೆ ಆಗಿದ್ದೇ ಆದಲ್ಲಿ ಇದರ ಪರಿಣಾಮವಾಗಿ ತರಕಾರಿ, ಪ್ಲೈವುಡ್, ಕಬ್ಬಿಣ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲಾರಿ ಮಾಲಕರು ಮತ್ತು ಏಜೆಂಟ್​​ ಅಸೋಸಿಯೇಷನ್​​ ಅಧ್ಯಕ್ಷ ಜಿ.ಆರ್. ಶಣ್ಮುಗಪ್ಪ, ಇಂಧನ ದರ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಕು ಸಾಗಣೆ ದರ ಹೆಚ್ಚಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಯೇ ಇಲ್ಲ ಎಂದಿದ್ದಾರೆ. ಡೀಸೆಲ್ ದರ ಏರಿದಾಗ ಸಾರಿಗೆ ವೆಚ್ಚವೂ ಸ್ವಯಂಚಾಲಿತವಾಗಿ ಹೆಚ್ಚುತ್ತದೆ. ಅದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆರ್ಥಿಕ ಅಪರಾಧಗಳ ಭಾರಿ ಏರಿಕೆ; ಪ್ರತಿ 2.5 ಗಂಟೆಗೆ ದಾಖಲಾಗ್ತಿದೆ ಒಂದು ಆರ್ಥಿಕ ವಂಚನೆ ಕೇಸ್!

ದರ ಏರಿಕೆ ಸಂಬಂಧ ನಾಳೆ ಸಭೆ

ಡೀಸೆಲ್ ದರ ಏರಿಕೆಗೆ ಅನುಗುಣವಾಗಿ ಸರಕು ಸಾಗಣೆ ದರವನ್ನು ಶೇ.10ರಷ್ಟು ಹೆಚ್ಚಿಸುವ ಕುರಿತು ಚರ್ಚಿಸಲು ಬುಧವಾರ (ಮೇ 27) ಸಾರಿಗೆ ಸಂಸ್ಥೆಗಳ ಸಭೆ ಕರೆಯಲಾಗಿದೆ ಎಂದು ಶಣ್ಮುಗಪ್ಪ ಹೇಳಿದ್ದಾರೆ. ಸಾರಿಗೆ ವಲಯ ಜಿಎಸ್‌ಟಿ ಹಾಗೂ ಇತರೆ ತೆರಿಗೆಗಳ ಮೂಲಕ ಸರ್ಕಾರಕ್ಕೆ ಭಾರೀ ಆದಾಯ ನೀಡುತ್ತಿದ್ದರೂ, ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚದ ನಡುವೆ ಯಾವುದೇ ನೇರ ಪರಿಹಾರ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ವಾರದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಲಾಜಿಸ್ಟಿಕ್ಸ್ ವೆಚ್ಚ ಸಹಜವಾಗಿಯೇ ಹೆಚ್ಚಲಿದೆ. ಜೂನ್ ಮೊದಲ ವಾರದಿಂದ ಗ್ರಾಹಕರು ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗೆ ಕನಿಷ್ಠ 50 ಪೈಸೆ ಹೆಚ್ಚುವರಿ ದರವನ್ನು ಪಾವತಿಸಬೇಕಾಗಬಹುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಲಹೆಗಾರ ರಮೇಶ್ ಚಂದ್ರ ಲಹೋಟಿ ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:28 pm, Tue, 26 May 26

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ