ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸುತ್ತಿರುವ ಪಿಎಫ್ಐ ಕಾರ್ಯಕರ್ತರು
ಜಾತಿ ಧರ್ಮಗಳನ್ನು ಮೆಟ್ಟಿ ನಿಂತಿರುವ ಪಿಎಫ್ಐ ಸಂಘಟನೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಎಲ್ಲಾ ಜಾತಿ ಧರ್ಮಗಳ ಕೊವಿಡ್ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರವನ್ನು ನೆರವೇರಿಸುತ್ತಿದೆ.

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡಾ ಗಣನೀಯವಾಗಿ ಏರಿಕೆಯಾಗುತ್ತಿದೆ. ಮೃತದೇಹಗಳನ್ನು ದಹನ ಮಾಡಲು ಬೆಂಗಳೂರಿನ ಚಿತಾಗಾರದಲ್ಲಿ ಆ್ಯಂಬುಲೆನ್ಸ್ಗಳು ಸಾಲು ಸಾಲಾಗಿ ನಿಲ್ಲುತ್ತಿವೆ. ಚಿತಾಗಾರ ಸಿಬ್ಬಂದಿ 24 ತಾಸು ಕೆಲಸ ಮಾಡಿದರೂ ಚಿತಾಗಾರ ಬಳಿ ಬಂದ ಮೃತದೇಹಗಳನ್ನ ದಹನ ಮಾಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಪಿ.ಎಫ್.ಐ ಕಾರ್ಯಕರ್ತರು ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜಾತಿ ಧರ್ಮಗಳನ್ನು ಮೆಟ್ಟಿ ನಿಂತಿರುವ ಪಿಎಫ್ಐ ಸಂಘಟನೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಎಲ್ಲಾ ಜಾತಿ ಧರ್ಮಗಳ ಕೊವಿಡ್ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರವನ್ನು ನೆರವೇರಿಸುತ್ತಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಣೆಯಿಂದ ಕೊರೊನಾ ಸೋಂಕಿನಿಂದ ಮೃತಪಟ್ಟ ಎಲ್ಲಾ ವರ್ಗದವರ ಅಂತ್ಯಸಂಸ್ಕಾರವನ್ನು ನೆರವೇರಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದೆ. ಕೊರೊನಾ ಪಾಸಿಟಿವ್ ಎಂದಾಕ್ಷಣ ಸ್ವತಃ ಸಂಬಂಧಿಗಳೆ ದೂರ ನಿಲ್ಲುವ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರ ಕಾರ್ಯ ಶ್ಲಾಘನೀಯ.
ನಿನ್ನೆ ಕೂಡಾ (ಏಪ್ರಿಲ್ 26) ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದ 40 ವರ್ಷದ ಮಹಿಳೆಯೊರ್ವಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆ ಮಹಿಳೆಯ ಅಂತ್ಯ ಸಂಸ್ಕಾರವನ್ನು ಪಿ.ಎಫ್.ಐ ಕಾರ್ಯಕರ್ತರು ಇಸ್ಲಾಂ ಧರ್ಮದ ವಿಧಿ ವಿಧಾನಗಳ ಪ್ರಕಾರ ನೆರವೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.
ಇದನ್ನೂ ಓದಿ
ಕೊವಿಡ್ 2ನೇ ಅಲೆಗೆ ಚುನಾವಣಾ ಆಯೋಗವೇ ಹೊಣೆ; ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್ ಹೈಕೋರ್ಟ್
ಟಿವಿ9 ಡಿಜಿಟಲ್ ವಿಶೇಷ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ
(funeral of corona infected is being done by PFI activists at Chikkaballapur)