ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.
ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.
ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.
ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್
ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.
Published On - 2:31 pm, Sat, 12 June 21