Sign In

By signing in or creating an account, you agree with Associated Broadcasting Company's Terms & Conditions and Privacy Policy.

G Madegowda Death: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ

G Madegowda Passes Away : ಹಿರಿಯ ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

G Madegowda Death: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ
ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ
Follow us
TV9 Web
| Updated By: guruganesh bhat

Updated on:Jul 17, 2021 | 8:59 PM

ಮಂಡ್ಯ: ಮಾಜಿ ಸಂಸದ, ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೋರಾಟಗಾರ ಜಿ.ಮಾದೇಗೌಡ (92) (G Madegowda) ವಿಧಿವಶರಾಗಿದ್ದಾರೆ. ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ 1989 ಮತ್ತು 1991ರಲ್ಲಿ ಆಯ್ಕೆಗೊಂಡಿದ್ದರು. ಹಿರಿಯ ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

ನಾಳೆ ಬೆಳಗ್ಗೆ ಮಂಡ್ಯದ ಬಂಧೀಗೌಡ ಬಡಾವಣೆಯಲ್ಲಿರುವ ಮಾದೇಗೌಡರ ನಿವಾಸಕ್ಕೆ ಪಾರ್ಥೀವ ಶರೀರವನ್ನು ತರಲಾಗುವುದು. ನಂತರ ಗಾಂಧಿ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿಂದ ಮದ್ದೂರು ಮುಖಾಂತರ ಹುಟ್ಟೂರು ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನ‌ಕ್ಕೆ ವ್ಯವಸ್ಥೆ ಮಾಡಲಾಗುವುದು. ಜತೆಗೆ ಭಾರತೀ ಕಾಲೇಜು ಅವರಣದಲ್ಲಿಯೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಧ್ಯಾಹ್ನ 2.30 ರ ಸುಮಾರಿಗೆ ಹನುಮಂತನಗರದಲ್ಲಿ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಜಿ‌. ಮಾದೇಗೌಡ ಅವರ ಪುತ್ರ ಮಧು.ಜಿ.ಮಾದೇಗೌಡ ಮಾಹಿತಿ ನೀಡಿದ್ದಾರೆ.

ಸುಮಾರು ಮೂರು ವರ್ಷಗಳಿಂದ ಸ್ವತಃ ಅವರೇ ಮುಂದೆ ನಿಂತು ಪ್ರಾರಂಭಿಸಿದ್ದ ಜಿ ಮಾದೇಗೌಡ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯು ಮದ್ದೂರು ತಾಲೂಕಿನ ಭಾರತಿನಗರ ಬಳಿಯಿದೆ.

ಇದನ್ನೂ ಓದಿ: 

G Madegowda: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡರಿಗೆ ತೀವ್ರ ಅನಾರೋಗ್ಯ

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಬಿರುಕು ವಿವಾದ: ಕಾವೇರಿ ನೀರಾವರಿ ನಿಗಮ ನೀಡಿರುವ ಅಧಿಕೃತ ಸ್ಪಷ್ಟನೆಯಲ್ಲಿ ಏನಿದೆ?

(G Madegowda Passes Away at 92 )

Published On - 8:30 pm, Sat, 17 July 21

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ