G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಸಚಿವ ಡಾ.ಜಿ.ಪರಮೇಶ್ವರ್​​​, ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಠಾಣೆಗೆ ಯಾರೇ ಬಂದರೂ ಸಂಯಮದಿಂದ ಮಾತನಾಡುವಂತೆ ಹೇಳಿದ್ದೇವೆ. ದೂರು ನೀಡಲು ಬಂದವರಿಗೆ ಧೈರ್ಯ ತುಂಬಿದರೆ ಅವರು ಖುಷಿಯಾಗುತ್ತಾರೆ. ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ. ಆ ಮೂಲಕ ಎಲ್ಲೇ ದೂರು ದಾಖಲಾದರೂ ನೋಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ಸಚಿವ ಡಾ.ಜಿ.ಪರಮೇಶ್ವರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 15, 2023 | 8:24 PM

ಬೆಂಗಳೂರು, ಸೆಪ್ಟೆಂಬರ್​ 15: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ. ಡಿಜಿಟಲೀಕರಣ ಮಾಡಿದರೆ ಎಲ್ಲೇ ದೂರು ದಾಖಲಾದರೂ ನೋಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwar) ಹೇಳಿದ್ದಾರೆ. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೂರು ನೀಡಲು ಬಂದವರಿಗೆ ಧೈರ್ಯ ತುಂಬಿ

ಪೊಲೀಸ್ ಠಾಣೆಗೆ ಬರುವವರ ಜೊತೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಠಾಣೆಗೆ ಯಾರೇ ಬಂದರೂ ಸಂಯಮದಿಂದ ಮಾತನಾಡುವಂತೆ ಹೇಳಿದ್ದೇವೆ. ದೂರು ನೀಡಲು ಬಂದವರಿಗೆ ಧೈರ್ಯ ತುಂಬಿದರೆ ಅವರು ಖುಷಿಯಾಗುತ್ತಾರೆ ಎಂದರು.

ಇದನ್ನೂ ಓದಿ: TV9 Karnataka Summit 2023; ಕೆಎಸ್​ಆರ್​ಟಿಸಿ ನೌಕರರಿಗೆ ಪಿಂಚಣಿ ನೀಡುವ ವ್ಯವಸ್ಥೆ ಜಾರಿಗೆ ತರುತ್ತೇವೆ: ರಾಮಲಿಂಗಾರೆಡ್ಡಿ

ಎಲ್ಲೋ ಏನೋ ಅಪರಾಧ ನಡೆದರೆ SP ಹೊಣೆ ಮಾಡುವುದು ನಡೆದುಬಂದಿದೆ. ನಾವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಅವರನ್ನು ಹೊಣೆ ಮಾಡುತ್ತೇವೆ. ಇನ್ಮುಂದೆ ಇದೆಲ್ಲ ಆಗಬಾರದು ಎಂದರೆ ವ್ಯವಸ್ಥೆಯಲ್ಲಿ ಸುಧಾರಣೆ ಆಗಬೇಕು ಎಂದು ಹೇಳಿದ್ದಾರೆ.

ಶಾಂತಿ ಸುವ್ಯವಸ್ಥೆ ಇರಬೇಕೆಂದರೆ ಪೊಲೀಸರು ಹಗಲಿರುಳು ಕೆಲಸ ಮಾಡಬೇಕು. ಎಸ್​ಪಿ ದರ್ಜೆಗಿಂತ ಮೇಲಿನ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ್ದೇವೆ. ಸರ್ಕಾರದ ದೃಷ್ಟಿಕೋನದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಕೆಲವರಿಗೆ ನಾವೇ ಪೊಲೀಸ್ ಎಂಬ ಭಾವನೆ

ಮಂಗಳೂರು, ಉಡುಪಿ ಭಾಗದಲ್ಲಿ ಕೆಲವರಿಗೆ ನಾವೇ ಪೊಲೀಸ್ ಎಂಬ ಭಾವನೆ ಇದೆ. ಅಂಥವರ ವಿರುದ್ಧ ಕ್ರಮಕ್ಕಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸಿದ್ದೇವೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕ್ಕೆ ಹೊಸ ವಿಂಗ್ ಆರಂಭಿಸಿದ್ದೆವು ಎಂದು ತಿಳಿಸಿದರು.

ಇದನ್ನೂ ಓದಿ: Madhu Bangarappa: ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ; ಮಧು ಬಂಗಾರಪ್ಪ

ನಾನು ಮಂಗಳೂರಿಗೆ ಭೇಟಿ ನೀಡಿದಾಗ ದೂರು ನೀಡಿದರು.​ ವಿದ್ಯಾರ್ಥಿಗಳು ಮಂಗಳೂರು ಬಿಟ್ಟು ಬೆಂಗಳೂರಿಗೆ ಹೋಗುತ್ತಿದ್ದಾರೆ. ನಮಗೆ ಹಳೇ ಮಂಗಳೂರು ಬೇಕು ಎಂದು ಜನ ನಮಗೆ ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಕ್ರೈಂ ಅಥವಾ ಬೇರೆ ಬೇರೆ ಘಟನೆಗಳನ್ನು ರಾಜ್ಯದಲ್ಲಿ ನಡೆಯುತ್ತಿರುತ್ತವೆ. ಇಲ್ಲಿಗೆ ನಿಂತು ಹೋಯಿತು ಎಂದು ಹೇಳಲು ಬರಲ್ಲ. ರಾತ್ರಿ ಕಳೆದು ಹಗಲಾಗುವುದರೊಳಗೆ ಮತ್ತೆ ಏನೋ ಆಗಿರುತ್ತದೆ.

ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣ ಬಹಳ ಕಡಿಮೆಯಾಗಿದೆ

ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣ ಬಹಳ ಕಡಿಮೆಯಾಗಿದೆ. ರಾಜ್ಯದಲ್ಲಿ ಇತರೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ತಿ ವಿವಾದಕ್ಕೆ ಗಲಾಟೆ, ಖಾಸಗಿ ವಿಚಾರಕ್ಕೆ ಕೊಲೆ ಪ್ರಕರಣ ನಡೆದಿದೆ. ಇಂತಹ ಪ್ರಕರಣ ನಡೆದ ನಂತರ ಗೊತ್ತಾಗುತ್ತೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Fri, 15 September 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ