ಕೊರೊನಾ ಸೋಂಕಿತರ ಚಿಕಿತ್ಸೆಗೆ ಶೇ.50 ರಷ್ಟು ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಗದಗ ಜಿಲ್ಲಾಧಿಕಾರಿ ಸೂಚನೆ

ಆರೋಗ್ಯ ಇಲಾಖೆ ವತಿಯಿಂದ ತಂಡವನ್ನು ರಚಿಸಿ ಖಾಸಗಿ ಆಸ್ಪತ್ರೆಗಳಲ್ಲಿರುವ ಜನರಲ್, ಐಸಿಯು, ಆಕ್ಸಿಜನ್, ವೆಂಟಿಲೇಟರ್, ಹಾಸಿಗೆಗಳ ಬಗ್ಗೆ ಮಾಹಿತಿಯನ್ನು ಕ್ರೋಡಿಕರಿಸಲು ಸೂಚಿಸಿದರು. ಜಿಲ್ಲೆಯಲ್ಲಿನ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹಾಸಿಗೆ ಲಭ್ಯವಿಲ್ಲದಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಕ್ರಮ ವಹಿಸಬೇಕು.

ಕೊರೊನಾ ಸೋಂಕಿತರ ಚಿಕಿತ್ಸೆಗೆ ಶೇ.50 ರಷ್ಟು ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಗದಗ ಜಿಲ್ಲಾಧಿಕಾರಿ ಸೂಚನೆ
ಖಾಸಗಿ ಆಸ್ಪತ್ರೆ ಆಡಳಿತಾಧಿಕಾರಿಗಳ ಸಭೆ
Follow us
sandhya thejappa
|

Updated on:Apr 27, 2021 | 9:32 AM

ಗದಗ: ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದೆ. ಕೊವಿಡ್ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಅನ್ವಯ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಕೊವಿಡ್19 ಸೋಂಕಿತರ ಚಿಕಿತ್ಸೆಗೆ ಮೀಸಲಿಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ನಿಗದಿಪಡಿಸಿದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಿದಾಗ ಅಂತಹ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಬಾರದು ಅಂತ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ಸೂಚಿಸಲಾಗುವ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರಗಳನ್ವಯ ಚಿಕಿತ್ಸೆ ಒದಗಿಸುವಂತೆ ಹೇಳಿದ್ದಾರೆ.

ರೆಮ್​ಡಿಸಿವಿರ್ ಲಸಿಕೆ ಒದಗಿಸಲು ಕ್ರಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕದ ಕೊರತೆಯಾಗದಂತೆ ಸಾಕಷ್ಟು ಮುಂಚಿತವಾಗಿ ದಾಸ್ತಾನು ಇಟ್ಟುಕೊಳ್ಳಬೇಕು. ಆಮ್ಲಜನಕದ ಕೊರತೆ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು. ರೆಮ್​ಡಿಸಿವಿರ್ ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೂ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೊರೊನಾ ಚಿಕಿತ್ಸೆಗಾಗಿ ನೇರವಾಗಿ ದಾಖಲಾಗುವ ಸೋಂಕಿತರಿಗೂ ಚಿಕಿತ್ಸೆ ಒದಗಿಸಬೇಕು. ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಜರುಗಿಸುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ತಂಡವನ್ನು ರಚಿಸಿ ಖಾಸಗಿ ಆಸ್ಪತ್ರೆಗಳಲ್ಲಿರುವ ಜನರಲ್, ಐಸಿಯು, ಆಕ್ಸಿಜನ್, ವೆಂಟಿಲೇಟರ್, ಹಾಸಿಗೆಗಳ ಬಗ್ಗೆ ಮಾಹಿತಿಯನ್ನು ಕ್ರೋಡಿಕರಿಸಲು ಸೂಚಿಸಿದರು. ಜಿಲ್ಲೆಯಲ್ಲಿನ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹಾಸಿಗೆ ಲಭ್ಯವಿಲ್ಲದಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಕ್ರಮ ವಹಿಸಬೇಕು. ಅಲ್ಲದೇ ಖಾಸಗಿ ಆಸ್ಪತ್ರೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸೋಂಕಿತರ ಚಿಕಿತ್ಸೆಯ ವಿವರ ಪಡೆದುಕೊಳ್ಳುವಂತೆ ತಿಳಿಸಿದರು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ತೊಂದರೆಯಾಗದಂತೆ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳು ಸಮನ್ವಯತದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಬಸರಿಗಿಡದ ಮಾತನಾಡಿ ಕಳೆದ ಸಾಲಿನಲ್ಲಿ ಏಳು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಈ ಬಾರಿಯೂ ಅದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗತ್ತಿದೆ. ಸರ್ಕಾರದ ಸುತ್ತೋಲೆಯನ್ವಯ ಖಾಸಗಿ ಆಸ್ಪತ್ರೆಯ ಪ್ರತಿಶತ 50 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲು ಹಾಗೂ ಸರ್ಕಾರ ನಿಗದಿಪಡಿಸಿದ ದರ ಆಕರ ಮಾಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ

ಸಚಿವ ಮಾಧುಸ್ವಾಮಿ ಕರೆ ಮಾಡಿ ಹೇಳಿದ್ದರೂ ಸಿಗದ ಬೆಡ್: 28 ವರ್ಷದ ಯುವಕ ಸಾವು

Covid 19: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

(Gadag District Collector corona instructs private hospitals to allocate 50 percent of their beds for treatment of infected)

Published On - 9:30 am, Tue, 27 April 21