AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ: 22 ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಪಾಸಾದವರಿಗೆ ಸುವರ್ಣಾವಕಾಶ!

ಗದಗ ಜಿಲ್ಲಾ ನ್ಯಾಯಾಲಯವು 22 ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ.

ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ: 22 ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಪಾಸಾದವರಿಗೆ ಸುವರ್ಣಾವಕಾಶ!
ಕೋರ್ಟ್‌ನಲ್ಲಿ ಉದ್ಯೋಗImage Credit source: Getty Images
ಅಕ್ಷತಾ ವರ್ಕಾಡಿ
|

Updated on: Oct 11, 2026 | 4:25 PM

Share

ಗದಗ ಜಿಲ್ಲಾ ನ್ಯಾಯಾಲಯದಲ್ಲಿ (Gadag eCourt) ಖಾಲಿ ಇರುವ ಜವಾನ (Peon) ಹುದ್ದೆಗಳ ಭರ್ತಿಗೆ ನೂತನ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಒಟ್ಟು 22 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ನಿಯಮಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಬಾರದು. ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದ್ದು, ವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ, ಎಸ್‌ಟಿ, ವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ. ವೇತನವನ್ನು ಗದಗ ಜಿಲ್ಲಾ ನ್ಯಾಯಾಲಯದ ನಿಯಮಾವಳಿಗಳ ಪ್ರಕಾರ ಪಾವತಿಸಲಾಗುತ್ತದೆ.

ಅರ್ಜಿ ಶುಲ್ಕ ಮತ್ತು ಪಾವತಿ ವಿವರಗಳು:

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಹಾಗೂ ವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ 100ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಎಸ್‌ಸಿ, ಎಸ್‌ಟಿ, ವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ (ಉಚಿತ). ಆಯ್ಕೆ ಪ್ರಕ್ರಿಯೆಯನ್ನು ಕೇವಲ ನೇರ ಸಂದರ್ಶನದ (Interview) ಆಧಾರದ ಮೇಲೆ ನಡೆಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ: 86 ಜವಾನ, ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಗದಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವ ಮೊದಲು ಚಾಲ್ತಿಯಲ್ಲಿರುವ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಭಾವಚಿತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ವಯಸ್ಸಿನ ಪುರಾವೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ. ಅರ್ಜಿಯಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಸೂಕ್ತ ಶುಲ್ಕ ಪಾವತಿಸಿದ ನಂತರ ‘Submit’ ಬಟನ್ ಕ್ಲಿಕ್ ಮಾಡಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ಪಡೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು ಮತ್ತು ವೆಬ್‌ಸೈಟ್:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 28
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 31
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 03
  • ಅಧಿಕೃತ ವೆಬ್‌ಸೈಟ್: gadag.dcourts.gov.in

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ